Slide
Slide
Slide
previous arrow
next arrow

ಆ.20 ರಿಂದ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ

300x250 AD

ಯಲ್ಲಾಪುರ: ವಿಶ್ವದರ್ಶನ ಕರಿಯರ್ ಅಕಾಡೆಮಿ ಹಾಗೂ ಜ್ಞಾನ ಭಾರತಿ ಸ್ಪರ್ಧಾತ್ಮಕ ತರಬೇತಿ ಕೇಂದ್ರವರ ಸಹಯೋಗದಲ್ಲಿ ಆ.20 ರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.


ಬ್ಯಾಂಕಿಂಗ್, ರೈಲ್ವೆ, ಪೆÇಲೀಸ್ ಹಾಗೂ ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಬಡ ಹಾಗೂ ಪ್ರತಿಭಾನ್ವಿತ ಅಭ್ಯರ್ಥಿಗಳ ನೇಮಕಾತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿಧಾನಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತದೆ.

300x250 AD

ಸರ್ಕಾರ 15 ಸಾವಿರ ಪೆÇಲೀಸ್ ಹಾಗೂ ಪಿ.ಎಸ್.ಐ ನೇಮಕಾತಿಯ ಅಧಿಸೂಚನೆ ಹೊರಡಿಸಿದ್ದು, ಜೊತೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿಯೂ ಸಾಕಷ್ಟು ಉದ್ಯೋಗವಕಾಶಗಳು ಇರುವದರಿಂದ ಈ ತರಬೇತಿ ಮಹತ್ವ ಪಡೆದಿದೆ. ತರಬೇತಿಯ ದಾಖಲಾತಿಗೆ ಆಗಸ್ಟ್ 17 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು 7337875279ಗೆ ಸಂಪರ್ಕಿಸಿ ಹೆಸರು ನೋಂದಾಯಿಸುವಂತೆ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Share This
300x250 AD
300x250 AD
300x250 AD
Back to top