ಕಾರವಾರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಇಂಜಿನಿಯರ್‌ಗಳಾದ ಸಿ.ಕೆ.ಮಲ್ಲಪ್ಪ ಅವರು ಕಾರವಾರ, ಅಂಕೋಲಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಅಮೃತ ಸರೋವರ ಸೇರಿದಂತೆ ವಿವಿಧ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕಾರವಾರ ತಾಲೂಕಿನ ಹಣಕೋಣ ಗ್ರಾಮ ಪಂಚಾಯತಿಯ ಹೊಟೇಗಾಳಿ ಗ್ರಾಮದ ಭೀಮ್‌ಕೋಲ್ ಕೆರೆ, ಅಂಕೋಲಾ ತಾಲೂಕಿನ ವಂದಿಗೆ ಗ್ರಾಮ ಪಂಚಾಯತಿಯ ಬಡಕುಮನೆ ಕೆರೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ, ಹೊನ್ನಾವರ ತಾಲೂಕಿನಲ್ಲಿನ ಹಲವು ಕಾಮಗಾರಿ ಸ್ಥಳಕ್ಖೆ ಭೇಟಿ ನೀಡಿ, ಕಾಮಗಾರಿಯ ಕ್ರಿಯಾ ಯೋಜನೆ, ಸ್ಥಳ, ಗುಣಮಟ್ಟ, ನೀರಿನ ಸಂಗ್ರಹಣಾ ಸಾಮರ್ಥ್ಯದ ಕುರಿತು ಪರೀಕ್ಷಿಸಿದರು. ನಂತರ ಸ್ಥಳದಲ್ಲಿದ್ದ ಎಲ್ಲ ತಾಲೂಕಿನ ನರೇಗಾ ಸಹಾಯಕ ನಿರ್ದೇಶಕರು, ತಾಂತ್ರಿಕ ಸಂಯೋಜಕರು, ಸಹಾಯಕರು, ಐಇಸಿ ಸಂಯೋಜಕರು ಹಾಗೂ ಪಿಆರ್‌ಇಡಿಯ ಎಇಇ ಗಳಿಗೆ ಗ್ರಾಮೀಣ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೇಗೆಲ್ಲ ಕಾಮಗಾರಿ ಕೈಗೊಳ್ಳಬಹುದು ಎಂಬ ಅಗತ್ಯ ತಾಂತ್ರಿಕ ಸಲಹೆಗಳನ್ನು ನೀಡಿದರು. ಜೊತೆಗೆ ಕಾಮಗಾರಿಯ ಕುರಿತಾದ ಸಮಗ್ರ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿಗಳಾದ ಡಿ.ಎಂ. ಜಕ್ಕಪ್ಪಗೋಳ್, ಅಂಕೋಲಾ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿ ಪಿ.ವೈ. ಸಾವಂತ, ಹೊನ್ನಾವರ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ನಾಯ್ಕ, ಎಡಿಪಿಸಿ ನಾಗರಾಜ್ ನಾಯ್ಕ, ಕಾರವಾರ, ಅಂಕೋಲಾ, ಹೊನ್ನಾವರ ತಾಲೂಕು ಪಂಚಾಯತ್‌ನ ಅಧಿಕಾರಿಗಳು, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.