• first
  second
  third
  Slide
  Slide
  previous arrow
  next arrow
 • ನರೇಗಾದ ಮೂಲಕ ಪರಿಸರವನ್ನು ಸಂರಕ್ಷಿಸಬೇಕಿದೆ: ಡಾ.ಬಾಲಪ್ಪನವರ

  300x250 AD

  ಕಾರವಾರ: ತಾಪಂ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಹಾಗೂ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಂಸ್ಥೆ, ಮೈಸೂರು ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಲ ಸಂಜೀವಿನಿ- ವೈಜ್ಞಾನಿಕ ಕ್ರಿಯಾ ಯೋಜನೆ ತಯಾರಿ ಕುರಿತ ತಾಲ್ಲೂಕು ಮಟ್ಟದ ತರಬೇತಿ ಕಾರ್ಯಕ್ರಮವನ್ನು ಕಾರವಾರ ತಾಲೂಕು ಪಂಚಾಯತ್‌ನ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಬಾಲಪ್ಪನವರ ಆನಂದಕುಮಾರ ಉದ್ಘಾಟಿಸಿದರು.

  ನಂತರ ಅವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಲ್ಲಿ ವೈಜ್ಞಾನಿಕ ತಂತ್ರಾಂಶಗಳನ್ನು ಬಳಸಿಕೊಂಡು ಮಣ್ಣು, ನೀರು ಹಾಗೂ ಪರಿಸರವನ್ನು ಕ್ರಮಬದ್ಧವಾಗಿ ಸಂರಕ್ಷಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
  ಜಿಯೋ ಸ್ಪೆಷಿಯಲ್ ತಂತ್ರಜ್ಞಾನ ಬಳಸಿಕೊಂಡು ವೈಜ್ಞಾನಿಕವಾಗಿ ಗುಡ್ಡಗಾಡು ಪ್ರದೇಶದಿಂದ ಹರಿದು ಹೋಗುವ ನೀರನ್ನು ತಡೆದು ಭೂಮಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವುದು, ಮಳೆಗಾಲದಲ್ಲಿ ಮಣ್ಣಿನ ಸವಕಳಿ ತಡೆಗಟ್ಟುವುದು, ಸಮರ್ಪಕವಾಗಿ ಪರಿಸರ ಸಂರಕ್ಷಿಸುವ ಉದ್ದೇಶದಿಂದ ಜಲ ಸಂಜೀವಿನಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜೊತೆಗೆ ನರೇಗಾದಡಿ ಮುಂದಿನ ಮೂರು ವರ್ಷಕ್ಕೆ ವೈಜ್ಞಾನಿಕ ಕ್ರಮಗಳನ್ನು ಆಧರಿಸಿ ನೀರು, ನೆಲ ಹಾಗೂ ಪರಿಸರವನ್ನು ಸಂರಕ್ಷಿಸುವ ಅಗತ್ಯವಿದೆ. ಹೀಗಾಗಿ ಕಾರ್ಯಗಾರದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರೂ ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡು ಸರಕಾರದ ಯೋಜನೆಗಳ ಯಶಸ್ಸಿಗೆ ಶ್ರಮಿಸಬೇಕು ಎಂದರು.
  ಜಿಲ್ಲಾ ಪಂಚಾಯತಿಯ ಎನ್‌ಆರ್‌ಡಿಎಂಎಸ್‌ನ ತಾಂತ್ರಿಕ ಅಧಿಕಾರಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಅನಿಲ ಆರ್. ನಾಯ್ಕ್ ಅವರು ಮಾತನಾಡಿ, ವೈಜ್ಞಾನಿಕ ಉಪಕರಣಗಳಾದ ಸ್ಯಾಟಲೈಟ್, ರಿಮೋಟ್ ಸೆನ್ಸಿಂಗ್, ಜಿಯೋಗ್ರಾಫಿಕಲ್ ಇನ್ಫಾರ್ಮೇಶನ್ ಸಿಸ್ಟಮ್ ಮೂಲಕ ಭೂಮಿಯ ರಚನೆ, ನೀರಿನ ಮೂಲ ಗುರುತಿಸಿ ನರೇಗಾದಡಿ ವಿವಿಧ ಜಲ ಸಂರಕ್ಷಣಾ ಕಾಮಗಾರಿ ಆಯ್ಕೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನಪ್ರತಿನಿಧಿಗಳು, ಸಾರ್ವಜನಿಕರು, ಅಧಿಕಾರಿಗಳು ಸಾಮೂಹಿಕವಾಗಿ ಚರ್ಚಿಸಿ ವೈಜ್ಞಾನಿಕ ಕ್ರಮದಲ್ಲಿ ಕಾಮಗಾರಿಗಳ ರೂಪರೇಷೆಗಳನ್ನು ತಯಾರಿಸಲು ಇಂತಹ ಕಾರ್ಯಗಾರಗಳ ಅವಶ್ಯಕತೆಯಿದೆ ಎಂದು ತಿಳಿಸಿದರು.
  ಕಾರ್ಯಗಾರದಲ್ಲಿ ಪಾಲ್ಗೊಂಡ ತಾಲೂಕು ಪಂಚಾಯತ್‌ನ ಎಂಐಎಸ್, ತಾಂತ್ರಿಕ, ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕರು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ವಿವಿಧ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಪಂ ಡಿಇಒಗಳಿಗೆ ಸಂಪನ್ಮೂಲ ವ್ಯಕ್ತಿಗಳಾದ ಜಿಲ್ಲಾ ಪಂಚಾಯತಿಯ ಎನ್‌ಆರ್‌ಡಿಎಂಎಸ್‌ನ ತಾಂತ್ರಿಕ ಅಧಿಕಾರಿ ಅನಿಲ ಆರ್. ನಾಯ್ಕ್, ಅಂಕೋಲಾ ತಾಪಂ ಟಿಸಿ ಅನೀಲ ಗಾಯತ್ರಿ, ಹೊನ್ನಾವರ ತಾಪಂ ಟಿಸಿ ಸುನಿಲ್ ಆಚಾರ್ಯ ಅವರು ನರೇಗಾದಡಿ ಜೀಯೋ ಸ್ಪೆಷಿಯಲ್ ತಂತ್ರಜ್ಞಾನ ಬಳಸಿಕೊಂಡು ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಕಾಮಗಾರಿಗಳ ಆಯ್ಕೆ ಮತ್ತು ಅನುಷ್ಠಾನದ ಬಗ್ಗೆ ಹಂತ ಹಂತವಾಗಿ ಪಿಪಿಟಿ ಮೂಲಕ ವಿವರಿಸಿದರು.
  ಈ ಸಂದರ್ಭದಲ್ಲಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನರೇಗಾ ಸಹಾಯಕ ನಿರ್ದೇಶಕರಾದ ರಾಮದಾಸ ನಾಯ್ಕ, ವ್ಯವಸ್ಥಾಪಕರಾದ ಅನಿತಾ ಬಂಡಿಕಟ್ಟಿ, ಅಭಿವೃದ್ಧಿ ಅಧಿಕಾರಿಗಳು, ವಿವಿಧ ಅನುಷ್ಠಾನ ಇಲಾಖೆಯ ಅಧಿಕಾರಿಗಳು, ತಾಲೂಕಾ ಐಇಸಿ ಸಂಯೋಜಕ ಫಕ್ಕೀರಪ್ಪ ತುಮ್ಮಣ್ಣನವರ ಸೇರಿದಂತೆ ತಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

  300x250 AD
  Share This
  300x250 AD
  300x250 AD
  300x250 AD
  Back to top