ಕಾರವಾರ: ಬಿಜೆಪಿಯ ಗ್ರಾಮೀಣ ಮಂಡಲದ ಚೆಂಡಿಯಾ ಮಹಾಶಕ್ತಿ ಕೇಂದ್ರದ ಸಭೆ ಪುರಾಣ ಪವಿತ್ರ ಕ್ಷೇತ್ರ ಷಶೇಜವಾಡದಲ್ಲಿ ನಡೆಯಿತು. ಪ್ರಥಮವಾಗಿ ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಿ ಸಭೆಯನ್ನು ಆರಂಭಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರು ತಮಗೆ ನೀಡಿದ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು ಎಂದರು. ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿ ಪಕ್ಷ ಸಂಘಟನೆಗೆ ವಿಶೇಷ ಗಮನ ನೀಡಿ ಎಂದು ಕಾರ್ಯಕರ್ತರನ್ನು ಹುರುದುಂಬಿಸಿದರು.
ಶಾಸಕಿ ಶಾಸಕಿ ರೂಪಾಲಿ ನಾಯ್ಕ, ಮುಂದಿನ ಚುನಾವಣೆ ದೃಷ್ಟಿಯಲ್ಲಿ ನಾವೆಲ್ಲರೂ ಸನ್ಮಾನ್ಯ ನರೇಂದ್ರ ಮೋದಿಜಿಯವರ ಮಹತ್ತರ ಸಾಧನೆಗಳನ್ನು ಹಾಗೂ ಯೋಜನೆಗಳನ್ನು ಮನೆ ಮನೆಗೆ ತಲುಪಿಸಬೇಕು. ಅಂತೆಯೇ ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷರು ಜವಾಬ್ದಾರಿಯುತ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಬಿಜೆಪಿ ಸಂಘಟನೆಯ ಬಗ್ಗೆ ವಿವರಿಸಿದರು. ವೇದಿಕೆ ಮೇಲೆ ಗ್ರಾಮೀಣ ಪ್ರಭಾರಿ ಗಜಾನನ ಗುನಗಾ, ಗ್ರಾಮೀಣ ಅಧ್ಯಕ್ಷ ಸುಭಾಷ್ ಗುನಗಿ, ಕಾರ್ಯದರ್ಶಿ ಸುಜಾತಾ ಬಾಂದೇಕರ, ರಾಜ್ಯ ಎಸ್.ಸಿ. ಮೋರ್ಚಾ ಸದಸ್ಯ ಎನ್.ಬಿ.ಸೂರ್ಯಪ್ರಕಾಶ ಇದ್ದರು. ಕಾರ್ಯಕ್ರಮದ ಕೊನೆಯಲ್ಲಿ ಚೆಂಡಿಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಉದಯ ನಾಯ್ಕ ವಂದನಾರ್ಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜಿಕ ಜಾಲತಾಣ ಪ್ರಮುಖ ಕಿಶನ್ ಕಾಂಬ್ಳೆ, ಬಿಜೆಪಿ ಬೂತ್ ಅಧ್ಯಕ್ಷರು, ಶಕ್ತಿ ಕೇಂದ್ರ ಪ್ರಮುಖರು, ವಿವಿಧ ಜವಾಬ್ದಾರಿ ಹೊತ್ತ ಬಿಜೆಪಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.