ದಾಂಡೇಲಿ: ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಜಂಟಿ ಸಂಧಾನ ಸಮಿತಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಗಿದೆ.
ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಮಿಕ ಸಂಘಗಳ ಪ್ರಾತಿನಿಧಿಕ ಸ್ವರೂಪ ನಿರ್ಧರಿಸುವ ಸಲುವಾಗಿ ಮತದಾನ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದೆ. ಡಿಸೆಂಬರ್ 6 ರಂದು ಮತದಾನ ನಡೆಯಲಿದೆ. ನ.23ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಚುನಾವಣೆಗೆ ಸ್ಪರ್ಧಿಸ ಬಯಸುವ ಕಾರ್ಮಿಕ ಸಂಘಗಳಿ0ದ ನಾಮಪತ್ರ ಸ್ವೀಕರಿಸಲಾಗುತ್ತದೆ. ಅಂದೇ ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ನ:24 ರಂದು ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ನ.06ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5.30ರವರೆಗೆ ಕಾಗದ ಕಾರ್ಖಾನೆಯ ಆವರಣದಲ್ಲಿ ಮತದಾನ ನಡೆಯಲಿದ್ದು, ಅಂದು ಸಂಜೆ 6.30ರಿಂದ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಮುಲ್ಲಾ ತಿಳಿಸಿದ್ದಾರೆ.