Slide
Slide
Slide
previous arrow
next arrow

ಗಣಪತಿ ದೇವಸ್ಥಾನದಲ್ಲಿ ಸಂಭ್ರಮದ ವಾರ್ಷಿಕೋತ್ಸವ

300x250 AD

ದಾಂಡೇಲಿ: ತಾಲೂಕಿನ ಆಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೇರವಾಡದ ಶ್ರೀಗಣಪತಿ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನಾ ವರ್ಧಂತಿ ಉತ್ಸವವು ಬುಧವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಜರುಗಿತು.
ಬೆಳಗ್ಗಿನಿಂದಲೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿ, ಆನಂತರ ಶ್ರೀಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಜರುಗಿತು. ಮಹಾಪೂಜೆಯಾದ ಬಳಿಕ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಮಿರಾಶಿ ಬಂಧುಗಳ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.
ವಾರ್ಷಿಕೋತ್ಸವದ ಯಶಸ್ಸಿಗೆ ಶ್ರೀಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಭಕ್ತಾಭಿಮಾನಿಗಳು ಶ್ರಮಿಸಿದ್ದರು.

300x250 AD
Share This
300x250 AD
300x250 AD
300x250 AD
Back to top