ಶಿರಸಿ: ನಗರದ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ನ.13ರಂದು ಏರ್ಪಡಿಸಲಾಗಿದೆ.
ಬೆಳಿಗ್ಗೆ 10 ಘಂಟೆಯಿಂದ ಮಧ್ಯಾಹ್ನ 2 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ ಖ್ಯಾತ ಮನೋವೈದ್ಯ ಡಾ.ಎಸ್.ಸಿ.ಕುಲಕರ್ಣಿ ಪಾಲ್ಗೊಂಡು ಸಲಹೆ, ಚಿಕಿತ್ಸೆ ನೀಡಲಿದ್ದಾರೆ. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಸುಧೀರ ಭಟ್ ಹಾಗೂ ಕಾರ್ಯದರ್ಶಿ ಅನಂತ ಹೆಗಡೆ ಆಶೀಸರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.