ಯಲ್ಲಾಪುರ: ಪಟ್ಟಣದ ವೈಟಿಎಸ್‌ಎಸ್ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ಶ್ರೀದೇವಿ ನಾಯ್ಕ, ಸಿರಿಲ್ ಸಿದ್ದಿ ಹಾಗೂ ನಂದಿತಾ ಗೌಡ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಅಧ್ಯಕ್ಷ ರವಿಕುಮಾರ ಶಾನಭಾಗ, ಕಾರ್ಯದರ್ಶಿ ರಾಜೇಂದ್ರಪ್ರಸಾದ ಭಟ್ಟ, ಪ್ರಾಂಶುಪಾಲರಾದ ವಾಣಿಶ್ರೀ ಹೆಗಡೆ ಹಾಗೂ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರವಿಕುಮಾರ ಶಾನಭಾಗ, ವಿದ್ಯಾರ್ಥಿಗಳು ಓದಿನ ಜೊತೆಗೆ ಆಟೋಟ ಸ್ಪರ್ಧೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡು ಜೀವನದ ಸ್ಪರ್ಧೆಯನ್ನು ಎದುರಿಸಲು ಸಿದ್ಧರಾಗಬೇಕು. ಆ ಮೂಲಕ ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸುವಂತಾಗಲಿ. ರಾಜ್ಯ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ಪಟ್ಟಣದ ಕಾಳಮ್ಮನಗರ ಕ್ರೀಡಾಂಗಣದ ಅಭಿವೃದ್ಧಿಗೆ 90 ಲಕ್ಷ ಹಣ ನೀಡಿದ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಅಭಿನಂದಿಸಿ ಮುಂದೆ ಸಿಗಬಹುದಾದ ಸೌಕರ್ಯಗಳನ್ನು ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಅವರು ಕಿವಿಮಾತು ಹೇಳಿದರು. ಮುಖ್ಯಶಿಕ್ಷಕ ಎನ್.ಎಸ್.ಭಟ್ಟ ಸ್ವಾಗತಿಸಿದರು. ಶಿಕ್ಷಕ ವಿನೋದ ಭಟ್ಟ ನಿರ್ವಹಿಸಿದರು. ಶಿಕ್ಷಕ ಕೆ.ಸಿ.ಮಾಳ್ಕರ ವಂದಿಸಿದರು.