ಕುಮಟಾ: ತಾಲೂಕಿನ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಸ್ ಕೇಂದ್ರೀಯ ವಿದ್ಯಾಲಯದಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.
ಶ್ರೀ ಮಠದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಶಾಖಾಮಠದ ಪೂಜ್ಯರಾದ ಸದ್ಗುರು ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಜ್ಯೋತಿ ಬೆಳಗಿಸಿ, ದಾಸವರೇಣ್ಯ ಕನಕದಾಸರ ಜೀವನ ಮತ್ತು ಸಾಧನೆಗಳ ಬಗ್ಗೆ, ಅವರು ಕನ್ನಡ ಸಾಹಿತ್ಯಕ್ಕೆ ನೀಡಿದ ಅಮೂಲ್ಯ ಕೀರ್ತನೆಗಳ ಬಗ್ಗೆ ಅನೇಕ ದೃಷ್ಟಾಂತಗಳ ಮೂಲಕ ಆಶೀರ್ವಚನ ನೀಡಿದರು.
ಮಿರ್ಜಾನ್ ಶಾಖಾಮಠದ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರು, ಪ್ರಾಂಶುಪಾಲೆ ಶ್ರೀಮತಿ ಲೀನಾ ಎಂ. ಗೊನೇಹಳ್ಳಿ, ಹಿರಿಯ ಶಿಕ್ಷಕ ಎಂ. ಜಿ. ಹಿರೇಕುಡಿ, ವಿದ್ಯಾರ್ಥಿಗಳು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕಿ ವಿದೂಷಿ ರಂಜನಾ ಆಚಾರ್ಯ ಪ್ರಾರ್ಥಿಸಿದರು. ಪ್ರೀತಿ ಮತ್ತು ಸಂಗಡಿಗರು ಕನಕ ದಾಸರು ರಚಿಸಿದ ದಾಸರ ಪದ ಹಾಡಿದರು. ಶಿಕ್ಷಕರಾದ ಸಂದೀಪ ನಾಯ್ಕ ಕನಕದಾಸರ ಬಗ್ಗೆ ಉಪನ್ಯಾಸ ನೀಡಿದರು.ಸೃಷ್ಟಿ ನಿರೂಪಿಸಿದಳು. ಸಿದ್ಧಾರ್ಥ ಸ್ವಾಗತಿಸಿದನು. ಇಶಾನಿ ವಂದಿಸಿದಳು.