Slide
previous arrow
next arrow

ಪ್ರೀತಿಯ ದೀಪ ಹಚ್ಚುವ ಕೆಲಸವನ್ನು ಕನಕದಾಸರು ಸಾಹಿತ್ಯದ ಮೂಲಕ ಮಾಡಿದ್ದಾರೆ: ಟಿ.ಎಸ್.ಹಳೆಮನೆ

300x250 AD

ಶಿರಸಿ: ನಗರದ ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಕನಕದಾಸರ ಭಾವಚಿತ್ರಕ್ಕೆ  ಕಾಲೇಜಿನ ಪ್ರಾಚಾರ್ಯ ಡಾ. ಟಿ ಎಸ್ ಹಳೆಮನೆ ಪುಷ್ಪ ಸಮರ್ಪಿಸುವ ಮೂಲಕ ಕನಕದಾಸರ ಜಯಂತಿಯನ್ನು ಆಚರಣೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಾಸ ಸಾಹಿತ್ಯವನ್ನು ಕೀರ್ತನೆಗಳ ಮೂಲಕ ಹಳ್ಳಿ ಹಳ್ಳಿಗೆ ತಲುಪಿಸುವ ಕಾರ್ಯವನ್ನು ಕನಕದಾಸರು ಮಾಡಿದರು. ಸಮಾಜವನ್ನು ತಿದ್ದುವ ಪ್ರಯತ್ನ ಅವರ ಸಾಹಿತ್ಯದಲ್ಲಿ ಎದ್ದು ಕಾಣುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಪ್ರೀತಿಯ ದೀಪ ಹಚ್ಚುವ ಕೆಲಸವನ್ನು ಸಾಹಿತ್ಯದ ಮೂಲಕ ಅವರು ಮಾಡಿದರು. 21ನೇ ಶತಮಾನದಲ್ಲಿ ನಾವಿದ್ದೇವೆ, ಆದರೂ ಜಾತಿ ಮತ ಪಂಥಗಳ ನಡುವೆ ಭೇದವನ್ನು ಕಾಣುತ್ತಿದ್ದೇವೆ. ಇದು ದೂರವಾಗಬೇಕು ಮಾನವರಾದ ನಾವೆಲ್ಲ  ಒಂದೇ ಎಂದರು.

300x250 AD

ಕಾಲೇಜಿನ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಪುಷ್ಪ ಸಮರ್ಪಿಸಿ ಗೌರವ ಸಲ್ಲಿಸಿದರು.

Share This
300x250 AD
300x250 AD
300x250 AD
Back to top