Slide
Slide
Slide
previous arrow
next arrow

ವಂದೂರು ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ

300x250 AD

ಹೊನ್ನಾವರ: ತಾಲೂಕಿನ ವಂದೂರು ವ್ಯವಸಾಯ ಸಹಕಾರಿ ಸಂಘದ ನೂತನ ವಿಸ್ತರಣಾ ಕಟ್ಟಡವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು.
ನಂತರ ಮಾತನಾಡಿ, ನೀಲಕೊಡು ಹಾಗೂ ಕಡ್ಲೆಯ ಸುತ್ತಮುತ್ತಲಿನ ಗ್ರಾಮಸ್ಥರೆಲ್ಲರ ಸಹಯೋಗದೊಂದಿಗೆ ಯಶಸ್ವಿಯಾಗಿ ಮುಂದುವರೆಯುತ್ತಿರುವ ವಂದೂರು ವ್ಯವಸಾಯ ಸಹಕಾರಿ ಸಂಘವು ಒಂದು ಮಾದರಿ ಸಂಘವೆ0ದರೆ ತಪ್ಪಾಗಲಾರದು. ಈ ಭಾಗದ ರೈತರಿಗೆ ಆರ್ಥಿಕ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಘವು ದಕ್ಷ ಹಾಗೂ ಪ್ರಾಮಾಣಿಕ ಅಧ್ಯಕ್ಷರು ಹಾಗೂ ನಿರ್ದೇಶಕರ ವೃಂದವನ್ನು ಹೊಂದಿದೆ. ಆಡಳಿತ ಮಂಡಳಿ ಹಾಗೂ ಸಾರ್ವಜನಿಕರೆಲ್ಲರು ಸಂಘದ ಯಶಸ್ಸಿಗೆ ಪಾಲುದಾರರು ಎಂದರು.
ಸಮಾರ0ಭದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ಟ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಹಾಗೂ ಸಂಘದ ಶೇರುದಾರರ ಪರಿಶ್ರಮದಿಂದ ಈ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು.
ಸ0ಘದ ಅಧ್ಯಕ್ಷರಿಗೆ ಹಾಗೂ ನಿರ್ದೇಶಕರನ್ನು ಮತ್ತು ಸಿಬ್ಬಂದಿಗಳಿಗೆ ಇದೇ ವೇಳೆ ಗೌರವಿಸಲಾಯಿತು. ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಿವಾನಂದ ಹೆಗಡೆ ಕಡತೋಕಾ, ಕಡ್ಲೆ ಗ್ರಾ.ಪಂ. ಅಧ್ಯಕ್ಷ ಗೋವಿಂದ ಗೌಡ, ಸಿಡಿಓ ಸರಿತಾ, ವಿದ್ವಾನ್ ವಿಘ್ನೇಶ್ವರ ಭಟ್ಟ ಬುಚ್ಚನ್, ಕೆಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗವತ್, ಕಡ್ಲೆ ಪಂಚಾಯತ್ ಸದಸ್ಯರುಗಳು ಹಾಗೂ ವಂದೂರು ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕರುಗಳು ಇದ್ದರು.

300x250 AD
Share This
300x250 AD
300x250 AD
300x250 AD
Back to top