Slide
Slide
Slide
previous arrow
next arrow

ಸಂಕಷ್ಟಗಳ ನಿವಾರಣೆಗೆ ಆಗಸಕ್ಕೆ ಬೃಹತ್ ಬಲೂನ್ ಹಾರಿಬಿಟ್ಟ ಭಕ್ತರು

300x250 AD

ಕಾರವಾರ: ತಾಲ್ಲೂಕಿನ ಮಾಜಾಳಿಯ ರಾಮನಾಥ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಶುಕ್ರವಾರ ಬಿಸಿ ಗಾಳಿಯ ಬಲೂನ್ ಅನ್ನು ಆಕಾಶಕ್ಕೆ ಹಾರಿಬಿಡಲಾಯಿತು. ಜಾತ್ರೆಗೆ ಆಗಮಿಸಿದ್ದ ಸಾವಿರಾರು ಭಕ್ತರು ಈ ದೃಶ್ಯವನ್ನು ಕಣ್ತುಂಬಿಕೊಂಡರು.
ಪ್ರತಿವರ್ಷ ಕಾರ್ತಿಕ ಮಾಸದ ದ್ವಿತೀಯ ದಿನದಂದು ಮಾಜಾಳಿಯ ರಾಮನಾಥ ದೇವರ ಜಾತ್ರೆ ನಡೆಯುತ್ತದೆ. ಅದರಂತೆ, ಈ ಬಾರಿಯೂ ಇಲ್ಲಿನ ರಾಮನಾಥ ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ರಾಮನಾಥ ದೇವರ ಮೂರ್ತಿಯನ್ನು ಗುರುವಾರ ರಾತ್ರಿ ಸಾತೇರಿದೇವಿ ದೇವಸ್ಥಾನಕ್ಕೆ ತರಲಾಯಿತು. ಅಲ್ಲಿಂದ ಬೆಳಿಗ್ಗೆ ದೇವರ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಕುಳಾವಿ ಜನರು ಕಟ್ಟಿರುವ ತೋರಣಗಳ ಬಳಿ ತೆರಳಿದ ಪಲ್ಲಕ್ಕಿಗೆ ಜನರು ಆರತಿ ಬೆಳಗಿ, ಹೂವು ಹಣ್ಣು ನೀಡಿ ಪೂಜೆ ಸಲ್ಲಿಸಿದರು.
ಬೆಳಿಗ್ಗೆ ಗ್ರಾಮದ ಸಾತೇರಿ ದೇವಸ್ಥಾನದ ಬಳಿ ಸುಮಾರು 20 ಅಡಿ ಎತ್ತರ, 8 ಅಡಿ ಅಗಲದ ಬಿಸಿಗಾಳಿ ತುಂಬಿದ ಬಲೂನ್ ಹಾರಿಸಿಬಿಡಲಾಯಿತು. ಬಲೂನ್ ಹಾರುವಾಗ ಹರಹರ ಮಹಾದೇವ ಎನ್ನುತ್ತಾ ಕೂಗುತ್ತ, ಚಪ್ಪಾಳೆ ಹಾಕುವ ಮೂಲಕ ಎಲ್ಲರೂ ಈ ದೃಶ್ಯವನ್ನು ಕಣ್ತುಂಬಿಕೊಂಡು ಸಂಭ್ರಮಿಸಿದರು. ಸಂಜೆ ರಾಮನಾಥ ದೇವಾಲಯದ ಬಳಿಯೂ ಬಲೂನ್ ಹಾರಿಸಲಾಗುತ್ತದೆ.
ಗ್ರಾಮದಲ್ಲಿನ ರೋಗ, ಸಂಕಷ್ಟಗಳು ಹೊಗೆಯ ರೂಪದಲ್ಲಿ ಗ್ರಾಮದಿಂದ ಹಾರಿ ಹೋಗಲಿ ಎನ್ನುವ ಉದ್ದೇಶದಿಂದ ಜಾತ್ರೆಯ ಸಂದರ್ಭದಲ್ಲಿ ಈ ರೀತಿ ಬಲೂನ್ ಅನ್ನು ಹಾರಿ ಬಿಡಲಾಗುತ್ತದೆ. ಆಕಾಶಕ್ಕೆ ಹಾರಿಬಿಡುವ ಈ ವಾಫರ್ ಸಾಕಷ್ಟು ಎತ್ತರದಲ್ಲಿ ಗಂಟೆಗಟ್ಟಲೇ ಹಾರಿ ನಂತರ ಸಮುದ್ರದಲ್ಲಿ ಬೀಳುತ್ತದೆ. ಹೀಗೆ ಬಿದ್ದರೆ ಗ್ರಾಮದಲ್ಲಿನ ತೊಂದರೆಗಳು ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಗ್ರಾಮಸ್ಥರದ್ದಾಗಿದೆ.

300x250 AD
Share This
300x250 AD
300x250 AD
300x250 AD
Back to top