Slide
Slide
Slide
previous arrow
next arrow

ಮೆಗಾ ಲೋಕ್ ಅದಾಲತ್‌ಗೆ ಚಾಲನೆ

300x250 AD

ದಾಂಡೇಲಿ: ನಗರದ ಸಿವಿಲ್ ನ್ಯಾಯಾಲಯದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮಕ್ಕೆ ಶನಿವಾರ ಚಾಲನೆಯನ್ನು ನೀಡಲಾಯಿತು.
ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ರೋಹಿಣಿ ಬಸಾಪುರ ಅವರು ಲೋಕ್ ಅದಾಲತಿಗೆ ಚಾಲನೆಯನ್ನು ನೀಡಿ ಬಾಕಿಯಿರುವ ಪ್ರಕರಣಗಳು ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಹಾಗೂ ಸರಕಾರಿ ಮತ್ತು ಖಾಸಗಿ ಬ್ಯಾಂಕ್, ಸಹಕಾರಿ ಸಂಘ, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದಂತೆ ಇರುವಂತಹ ಪ್ರಕರಣಗಳನ್ನು ಇತ್ಯರ್ಥಪಡಿಸಲು ಲೋಕ್ ಅದಾಲತ್ ಮಹತ್ವದ ಕರ‍್ಯಕ್ರಮವಾಗಿದೆ. ತ್ವರಿತಸೇವೆ ಮತ್ತು ಕಡಿಮೆ ಖರ್ಚಿನಲ್ಲಿ ಪ್ರಕರಣಗಳ ಇತ್ಯರ್ಥಕ್ಕೆ ಲೋಕ್ ಅದಾಲತ್ ಪರಿಣಾಮಕಾರಿಯಾಗಿದ್ದು, ಕ್ಷಕ್ಷಿದಾರರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಸರಕಾರಿ ಅಭಿಯೋಜಕರಾದ ಹುಸೇನಸಾಬ ನದಾಫ್ ಹಾಗೂ ಸಂಧಾನಕಾರರಾಗಿ ನ್ಯಾಯವಾದಿ ಕೋಮಲ್ ಶಿಂಧೆ ಅವರು ಕರ್ತವ್ಯ ನಿರ್ವಹಿಸಿದರು. ಲೋಕ್ ಅದಾಲತ್ ಯಶಸ್ಸಿಗಾಗಿ ನಗರದ ವಕೀಲರುಗಳು, ಸಿವಿಲ್ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸರು ಸಹಕರಿಸಿದರು. ರಾಜಿ ಸಂಧಾನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಜನರು ಲೋಕ್ ಅದಾಲತ್ ಕಾರ್ಯಕ್ರಮದ ಪ್ರಯೋಜನವನ್ನು ಪಡೆಯಲು ಆಗಮಿಸಿದ್ದರು.
ಈ ಸಂದರ್ಭದಲ್ಲಿ ನಗರದ ವಕೀಲರ ಸಂಘದ ಅಧ್ಯಕ್ಷ ವಿ.ಆರ್.ಹೆಗಡೆ,ಕಾರ್ಯದರ್ಶಿ ವಿಶ್ವನಾಥ ಲಕ್ಷ್ಯಟ್ಟಿ, ಹಾಗೂ ವಕೀಲರುಗಳು ಮತ್ತು ನಗರದ ವಿವಿಧ ಸರಕಾರಿ, ಖಾಸಗಿ ಬ್ಯಾಂಕ್, ಸಹಕಾರಿ ಸಂಘಗಳ ವ್ಯವಸ್ಥಾಪಕರುಗಳು, ಅಧಿಕಾರಿಗಳು, ಸಿವಿಲ್ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top