ದಾಂಡೇಲಿ: ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ಆಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೇರವಾಡದಲ್ಲಿ ಸ್ಥಳೀಯ ಆಯ್ದ ಫಲಾನುಭವಿಗಳಿಗೆ ಉಚಿತವಾಗಿ ಅಡುಗೆ ಅನಿಲ ವಿತರಿಸುವ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.
ಸ್ಥಳೀಯ ಗ್ರಾಮ ಪಂಚಾಯ್ತ ಸದಸ್ಯರಾದ ಸುಭಾಶ್ ಬೋವಿವಡ್ಡರ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಸುಭಾಶ್ ಬೋವಿವಡ್ಡರ ಅವರು ಉರುವಲು ರಹಿತ ಮನೆಯಾಗಬೇಕೆಂಬ ಸದುದ್ದೇಶದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉಜ್ವಲಾ ಯೋಜನೆಯನ್ನು ಜಾರಿಗೊಳಿಸಿದ್ದು, ಅತ್ಯಂತ ಉಪಯುಕ್ತ ಮತ್ತು ಪರಿಸರ ಸ್ನೇಹಿ ಯೋಜನೆಯಾಗಿ ಈ ಯೋಜನೆ ಗಮನ ಸೆಳೆದಿದೆ ಎಂದು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ನಗರದ ವಿಘ್ನೇಶ್ವರ ಗ್ಯಾಸ್ ಏಜೆನ್ಸಿಯ ಸಿಬ್ಬಂದಿಗಳು, ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.