ಶಿರಸಿ: ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನಾರಾಯಣ ಭಾಗವತರಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಶಿರಸಿ ತಾಲೂಕು ಘಟಕ ವತಿಯಿಂದ ಸೋಮವಾರ ತಾಲೂಕಿನ ಇಸಳೂರಿನಲ್ಲಿ ನಡೆದ ಸಮಾರಂಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮೂಲಕ ಸನ್ಮಾನಿಸಿ ಅಭಿನಂದಿಸಲಾಯಿತು.
ಡಿಡಿಪಿಐ ಬಸವರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಹೆಗಡೆ , ಶಿರಸಿ ತಾಲೂಕು ಘಟಕದ ಅಧ್ಯಕ್ಷ ಎಸ್.ಜಿ.ಹೆಗಡೆ, ಜಿಲ್ಲಾ ಉಪಾಧ್ಯಕ್ಷ ರಾಜೇಶ್ ಎಚ್. ನಾಯಕ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಧರ್ಮಾನಂದ ಭಟ್ ಮತ್ತು ಇತರರು ಉಪಸ್ಥಿತರಿದ್ದರು.
ರಾಜ್ಯ ಉತ್ತಮ ಶಿಕ್ಷಕ ವಿಜೇತ ನಾರಾಯಣ್ ಭಾಗವತ್’ಗೆ ಸನ್ಮಾನ
