• first
    second
    third
    previous arrow
    next arrow
  • Trending Now

    ಸಚಿವರ ಸಭೆಗೆ ಹೊರಟಿದ್ದ ಕಾರು ಪಲ್ಟಿ; ಸಿದ್ದಾಪುರ PWD ಅಧಿಕಾರಿ ಸಾವು

    300x250 AD

    ಅಂಕೋಲಾ: ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಉಸ್ತುವಾರಿ ಸಚಿವರ ಸಭೆಗೆ ಬರುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಸಿದ್ದಾಪುರ ತಾಲೂಕಿನ ಲೋಕೋಪಯೋಗಿ ಇಲಾಖೆಯ ಎ‌.ಇ.ಇ ಸಾವು ಕಂಡು ನಾಲ್ಕು ಜನ ಅಧಿಕಾರಿಗಳು ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಬಾಳೆಗುಳಿ ಬಳಿ ನಡೆದಿದೆ.

    ಸಿದ್ದಾಪುರ ತಾಲೂಕಿನ ಲೋಕೋಪಯೋಗಿ ಇಲಾಖೆ ಎಇಇ ,ಮುದುಕಣ್ಣನವರ್(58) ಮೃತ ಪಟ್ಟ ಅಧಿಕಾರಿಯಾಗಿದ್ದು ,ಗಂಭೀರ ಗಾಯಗೊಂಡವರನ್ನು ಅಂಕೋಲ ಹಾಗೂ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    300x250 AD

    ಇಂದು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ನೆರೆ ‌ಹಾಗೂ ಕೊರೋನಾ ಸಂಬಂಧ ಅಧಿಕಾರಿಗಳ ಸಭೆ ಇದಾಗಿದ್ದು ,ಸಭೆಗೆ ಲೋಕೋಪಯೋಗಿ ಇಲಾಖೆಯ ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನ ಇಂಜಿನಿಯರ್ ಗಳು ಒಂದೇ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಅಂಕೋಲದ ಬಾಳೆಗುಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅನಾಹುತ ಸಂಭವಿಸಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಹೆಚ್ಚಿನ ವಿವರ ಬರಬೇಕಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top