• first
  second
  third
  Slide
  Slide
  previous arrow
  next arrow
 • ಮಾಲಾದೇವಿ ಮೈದಾನ ಅಭಿವೃದ್ಧಿಗೆ ಸಂಕಲ್ಪ: ಶಾಸಕಿ ರೂಪಾಲಿ

  300x250 AD

  ಕಾರವಾರ: ಹಲವು ವರ್ಷಗಳ ಕನಸಾಗಿದ್ದ ಮಾಲಾದೇವಿ ಮೈದಾನ ಅಭಿವೃದ್ಧಿ ಹಾಗೂ ಆವರಣಗೋಡೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು.
  ನಗರದ ಮಾಲಾದೇವಿ ಮೈದಾನದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ 47.50 ಲಕ್ಷ ವೆಚ್ಚದ ಆವರಣ ಗೋಡೆ ಹಾಗೂ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
  ಮಾಲಾದೇವಿ ಮೈದಾನದಲ್ಲಿ ಬೇರೆ ಬೇರೆ ತಾಲ್ಲೂಕುಗಳಿಂದ ಬಂದು ಕ್ರಿಡಾಕೂಟಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಇಲ್ಲಿ ಸರಿಯಾದ ಸೌಲಭ್ಯಗಳು ಇಲ್ಲದಿರುವುದನ್ನು ಕಂಡು ಬೇಸರವಾಗುತ್ತಿತ್ತು. ಆದರೆ, ಈಗ ಬದಲಾವಣೆಯ ಗಾಳಿ ಬೀಸುತ್ತಿದೆ. 47.50 ಲಕ್ಷ ವೆಚ್ಚದಲ್ಲಿ ಆವರಣಗೋಡೆ ನಿರ್ಮಿಸಲಾಗುತ್ತಿದೆ. ಈ ಹಣ ಸಾಕಾಗುವುದಿಲ್ಲ. ಹೆಚ್ಚುವರಿಯಾಗಿ ಒದಗಿಸಲಾಗುವುದು. ಕ್ರೀಡಾಂಗಣಕ್ಕೆ ಬರಲು ಮೂರು ಪ್ರವೇಶ ದ್ವಾರವನ್ನು ಇಡಲಾಗುತ್ತದೆ ಎಂದರು.
  ಮೈದಾನದ ಅಭಿವೃದ್ಧಿಗೆ ಮುತುವರ್ಜಿ ವಹಿಸಿ ಇತಿಹಾಸದಲ್ಲಿ ಮೊದಲ ಬಾರಿಗೆ ಕ್ರೀಡೆಗಳಿಗೆ ಅನುಕೂಲವಾಗುವಂತೆ 5 ಕೋಟಿ ರೂ ಹೆಚ್ಚಿನ ವೆಚ್ಚದಲ್ಲಿ ಅಗತ್ಯ ಟ್ರ‍್ಯಾಕ್, ಒಳಾಂಗಣ ಕ್ರೀಡಾಂಗಣ, ವಿಶ್ರಾಂತಿ ಕೊಠಡಿ, ಪ್ರತ್ಯೇಕ ಶೌಚಾಲಯ, ಆವರಣ ಗೋಡೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳು ಬರಲಿವೆ ಎಂದರು.
  ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಡಾ.ನಿತಿನ ಪಿಕಳೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುಜಾತಾ ತಾಮಸೆ, ವಾರ್ಡ್ನ ಸದಸ್ಯ ಪ್ರೇಮಾನಂದ ನಾಯ್ಕ, ನಗರಸಭೆಯ ಇನ್ನಿತರ ಸದಸ್ಯರು, ಪೌರಾಯುಕ್ತರು, ಸಾರ್ವಜನಿಕರು, ಅಧಿಕಾರಿಗಳು ಉಪಸ್ಥಿತರಿದ್ದರು.

  300x250 AD
  Share This
  300x250 AD
  300x250 AD
  300x250 AD
  Back to top