• Slide
  Slide
  Slide
  previous arrow
  next arrow
 • ನ.23ಕ್ಕೆ ಧ್ಯಾನ ಮಂದಿರದಲ್ಲಿ ಸಹಸ್ರ ದೀಪೋತ್ಸವ

  300x250 AD

  ಭಟ್ಕಳ: ಶ್ರೀರಾಮ ಕ್ಷೇತ್ರದ ಕರಿಕಲ್ ಧ್ಯಾನ ಮಂದಿರದಲ್ಲಿ ಕಾರ್ತಿಕ ಮಾಸದ ಕೊನೆಯ ಸಹಸ್ರ ದೀಪೋತ್ಸವ ಕಾರ್ಯಕ್ರಮ ನ.23ರಂದು ನಡೆಯಲಿದೆ ಎಂದು ಶ್ರೀರಾಮ ಕ್ಷೇತ್ರದ ಸೇವಾ ಸಮಿತಿ ತಾಲೂಕು ಅಧ್ಯಕ್ಷ ಶ್ರೀಧರ ನಾಯ್ಕ ಹೇಳಿದರು.
  ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿಗಳ ಕೃಪಾಶೀರ್ವಾದದೊಂದಿಗೆ ನಡೆಯುವ ಈ ದೀಪೋತ್ಸವ ಅಂದು ರಾತ್ರಿ 7 ಗಂಟೆಗೆ ನಡೆಯಲಿದೆ. ಕಾರ್ತಿಕ ಮಾಸದ ಕೊನೆಯ ಪೂಜೆಯ ನಂತರ ಭಕ್ತಾದಿಗಳಿಗೆ ಮಹಾ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 9.30ಕ್ಕೆ ಶ್ರೀ ಸಿಗಂದೂರು ಮೇಳದವರಿಂದ ಮಾರುತಿ ಪ್ರತಾಪ ಎಂಬ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಶ್ರೀದೇವರ ಪ್ರಸಾದ ಸ್ವೀಕರಿಸಬೇಕೆಂದು ಹೇಳಿದರು.
  ಈ ಸಂದರ್ಭದಲ್ಲಿ ಶ್ರೀನಿಚ್ಚಲಮಕ್ಕಿ ಗುರುಮಠ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಶ್ರೀರಾಮ ಕ್ಷೇತ್ರ ಸೇವಾ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top