ಕಾರವಾರ: ಶಾಸಕಿ ರೂಪಾಲಿ ಎಸ್.ನಾಯ್ಕ ಅವರ ಕೋರಿಕೆಯ ಹಿನ್ನೆಲೆಯಲ್ಲಿ ಅಂಕೋಲಾ ತಾಲ್ಲೂಕಿನ ರಾಮನಗುಳಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 25 ಹಾಸಿಗೆಯ ಮಾದರಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಸರ್ಕಾರ ಅನುಮೋದನೆ ನೀಡಿದೆ.
ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳ ಸಂಖ್ಯೆ, ಹೆಚ್ಚಿನ ಕಾರ್ಯದೊತ್ತಡ ಇವುಗಳನ್ನು ಗಮನದಲ್ಲಿಟ್ಟುಕೊಂಡು, ರಾಮನಗುಳಿ ಗ್ರಾಮ ತಾಲೂಕು ಕೇಂದ್ರಕ್ಕೆ ದೂರ ಇರುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಶಾಸಕಿ ರೂಪಾಲಿ ಎಸ್.ನಾಯ್ಕ ರಾಮನಗುಳಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉನ್ನತೀಕರಿಸುವಂತೆ ಬೇಡಿಕೆ ಮಂಡಿಸಿದ್ದರು.
ಸರ್ಕಾರ ರಾಮನಗುಳಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 25 ಹಾಸಿಗೆಯ ಮಾದರಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಸಮ್ಮತಿಸಿದೆ. ಇದರಿಂದ ಸ್ಥಳೀಯರಿಗೆ ಉತ್ತಮ ಆರೋಗ್ಯ ಸೇವೆ ಲಭ್ಯವಾಗಲಿದೆ.
ಕೋಟ್
ರಾಮನಗುಳಿ ಹಾಗೂ ಸುತ್ತಮುತ್ತಲಿನ ಜನತೆಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ದೃಷ್ಟಿಯಿಂದ ಈ ಆರೋಗ್ಯ ಕೇಂದ್ರವನ್ನು ಉನ್ನತೀಕರಿಸುವ ಬೇಡಿಕೆ ಮಂಡಿಸಲಾಗಿತ್ತು. ಸರ್ಕಾರ ಸಮ್ಮತಿಸಿರುವುದು ಸಂತಸಕ್ಕೆ ಕಾರಣವಾಗಿದೆ. ಇದರಿಂದ ಜನತೆಗೆ ಅನುಕೂಲವಾಗಲಿದೆ.
• ರೂಪಾಲಿ ಎಸ್.ನಾಯ್ಕ, ಶಾಸಕಿ
ರೂಪಾಲಿ ಮನವಿಗೆ ಸರ್ಕಾರದ ಸ್ಪಂದನೆ: ರಾಮನಗುಳಿ ಆಸ್ಪತ್ರೆ ಮೇಲ್ದರ್ಜೆಗೆ
![](https://euttarakannada.in/wp-content/uploads/2022/11/download-16.jpg?v=1668748850)