Slide
Slide
Slide
previous arrow
next arrow

ನ.21ರಂದು ಎಂಎಂ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗಮೇಳ

300x250 AD

ಶಿರಸಿ: ನಗರದ ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಸಿಐಸಿಐ ಬ್ಯಾಂಕ್ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ನ. ಸೋಮವಾರ ಆಯೋಜಿಸಲಾಗಿದೆ. ಅಂದು ಮುಂಜಾನೆ 10 ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಇಎಸ್ ನ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ ಅಧ್ಯಕ್ಷತೆಯನ್ನ ವಹಿಸಲಿದ್ದು, ಐಸಿಐಸಿಐ ಬ್ಯಾಂಕಿನ ವಲಯ ನಿರ್ದೇಶಕ ಗೋಪಾಲ ಗಡಗಿ, ಉಪಸಮಿತಿ ಅಧ್ಯಕ್ಷ ಎಸ್.ಕೆ. ಭಾಗವತ್ ಉಪಸ್ಥಿತರಿರಲಿದ್ದಾರೆ. ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಸೇರಿದಂತೆ ಯಾವುದೇ ಪದವಿಧರರಾದರೂ ಈ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆ ಹೊರ ಜಿಲ್ಲೆಯ ಉದ್ಯೋಗ ಆಕಾಂಕ್ಷಿಗಳಿಗೂ ಪಾಲ್ಗೊಳ್ಳಲು ಅವಕಾಶವಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಟಿ.ಎಸ್. ಹಳೆಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top