Slide
Slide
Slide
previous arrow
next arrow

ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶೀಘ್ರ ಕೆಲಸ ಆರಂಭಿಸಿ: ಸ್ಪೀಕರ್ ಕಾಗೇರಿ

300x250 AD

ಸಿದ್ದಾಪುರ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣ ಕಾರ್ಯದಲ್ಲಿ ಉತ್ತರ ಕನ್ನಡ ಜಿಲ್ಲೆಯು ಮುಂಚೂಣಿಯಲ್ಲಿದ್ದು, ಆದಷ್ಟು ಬೇಗ ಕಸ ಸಂಗ್ರಹಣೆ ಹಾಗೂ ವಿಂಗಡಣೆ ಕೆಲಸ ಆರಂಭಿಸಿ ಘಟಕದ ಸದುಪಯೋಗ ಪಡೆಯಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಪ್ರಾಯಪಟ್ಟರು.
ತಾಲೂಕಿನ ಮನಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣವಾದ ಸ್ವಚ್ಛ ಸಂಕೀರ್ಣ ಘನತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಕೇಂದ್ರ ಸರ್ಕಾರವು ಗ್ರಾಮೀಣ ಪ್ರದೇಶಗಳಲ್ಲಿ ಕಸ ನಿರ್ವಹಣೆಗೆ ಸ್ವಚ್ಛ ಸಂಕೀರ್ಣ ಘಟಕ ನಿರ್ಮಿಸಿದ್ದು, ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಹಾಗೇನೆ ಸರ್ಕಾರದ ವಿವಿಧ ಯೋಜನೆಗಳಡಿ ಕೈಗೊಳ್ಳುವ ಹಲವು ಕಾಮಗಾರಿಗಳಿಂದ ಗ್ರಾಮೀಣ ಮಟ್ಟದಲ್ಲಿ ಉತ್ತಮ ಕೆಲಸಗಳಾಗಲಿ, ಉದ್ಯೋಗ ಖಾತ್ರಿ ಯೋಜನೆಯಡಿ ಜನರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ವೈಯಕ್ತಿಕ ಕಾಮಗಾರಿ ಪಡೆದುಕೊಂಡು ಅಭಿವೃದ್ಧಿಯಾಗಬೇಕು. ಪಂಚಾಯತ್ ಮಟ್ಟದಲ್ಲಿ ಕಾಮಗಾರಿ ಕಾರ್ಯಗತಗೊಂಡರೆ ಮಾತ್ರ ದೇಶದ ಅಭಿವೃದ್ಧಿ ಕಾಣಲು ಸಾಧ್ಯವಿದೆ ಎಂದರು.
ಪ್ರತಿ ಮನೆಯಲ್ಲೂ ಸ್ವಚ್ಛತೆಗೆ ಒತ್ತು ನೀಡುವ ಮೂಲಕ ಶೌಚಾಲಯ ನಿರ್ಮಾಣ ಕಾರ್ಯ ಯಾವುದೇ ಕಾರಣಕ್ಕೂ ಕುಂಠಿತವಾಗದಂತೆ ನೋಡಿಕೊಳ್ಳಬೇಕು. ಜೊತೆಗೆ ಬಯಲು ಶೌಚ ಮುಕ್ತ ಗ್ರಾಮ ನಿರ್ಮಾಣವಾಗಬೇಕು ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ನರೇಗಾ ಸಹಾಯಕ ನಿರ್ದೇಶಕರಾದ ಡಿ.ಈ.ದಿನೇಶ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಆರ್.ನಾಯ್ಕ, ಉಪಾಧ್ಯಕ್ಷ ನಾಗರಾಜ್ ಆರ್ ನಾಯ್ಕ, ಹಾಗೂ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಟರಾಜ್ ಆರ್.ನಾಯ್ಕ, ತಾಲೂಕು ಪಂಚಾಯತ್ ಐಇಸಿ ಸಂಯೋಜಕಿ ಪೂರ್ಣಿಮಾ ಗೌಡ, ತಾಲೂಕು ತಾಂತ್ರಿಕ ಸಹಾಯಕ ಸಂದೀಪ್, ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿ ಇದ್ದರು.

300x250 AD
Share This
300x250 AD
300x250 AD
300x250 AD
Back to top