Slide
Slide
Slide
previous arrow
next arrow

ಪ್ರತಿ ದೇವರ ಕಾರ್ಯದಲ್ಲೂ ಸಾರ್ವಜನಿಕರು ಭಾಗವಹಿಸಬೇಕು: ಶಾಸಕಿ ರೂಪಾಲಿ

300x250 AD

ಕಾರವಾರ: ಗ್ರಾಮದ ಪ್ರತಿಯೊಂದು ದೇವರ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಬೇಕು. ಪ್ರತಿ ದೇವರಲ್ಲಿ ಒಂದು ವಿಶೇಷವಾದ ಶಕ್ತಿ ಇದ್ದು, ನಮಗೆ ಶಕ್ತಿ, ಬುದ್ಧಿ ನೀಡಿ ನಮ್ಮಿಂದ ಒಳ್ಳೆಯ ಕೆಲಸಗಳನ್ನು ಮಾಡಿಸುತ್ತದೆ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.
ತಾಲ್ಲೂಕಿನ ಅಸ್ನೋಟಿಯಲ್ಲಿ ಮುಜರಾಯಿ ಇಲಾಖೆಯ ಶಾಸಕರ ಅನುದಾನದಲ್ಲಿ 25 ಲಕ್ಷ ರೂಪಾಯಿ ಅಸ್ನೋಟಿ ತುಳಸಿ ಕಟ್ಟೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಕಾರವಾರ- ಅಂಕೋಲಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ನನ್ನ ಕನಸ್ಸಾಗಿದೆ. ಅದೇ ದಿಶೆಯಲ್ಲಿ ನಾನು ಹಗಲು ರಾತ್ರಿ ಶ್ರಮಿಸುತ್ತಿದ್ದೆನೆ. ದೇವರ ದಯೆಯಿಂದ ನಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗುತ್ತಿವೆ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪರವರು ಸಾಕಷ್ಟು ಸಹಕಾರ ನೀಡುತ್ತಿದ್ದಾರೆ. ನಾನು ಯಾವುದೇ ಅಧಿಕಾರದ ಆಸೆಯಿಂದ ಕೆಲಸ ಮಾಡುತ್ತಿಲ್ಲ ನನ್ನ ಕ್ಷೇತ್ರದ ಅಭಿವೃದ್ಧಿ ನನ್ನ ಗುರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಅಸ್ನೋಟಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ದೇವಸ್ಥಾನ ಸಮಿತಿ ಸದಸ್ಯರು, ಊರಿನ ಮುಖಂಡರು, ಗ್ರಾಮಸ್ಥರು, ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top