Slide
Slide
Slide
previous arrow
next arrow

ವಿಜ್ಞಾನ ವಸ್ತುಪ್ರದರ್ಶನ: ಹಿರೇಗುತ್ತಿ ಹೈಸ್ಕೂಲ್ ಜಿಲ್ಲಾ ಮಟ್ಟಕ್ಕೆ

300x250 AD

ಕುಮಟಾ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉತ್ತರಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದೊಂದಿಗೆ ಎಸ್‌ಕೆಪಿ ಕತಗಾಲದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ ಹಿರೇಗುತ್ತಿ ಹೈಸ್ಕೂಲ್ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜ್ಞಾನ ಶಿಕ್ಷಕ ಮಹಾದೇವ ಗೌಡ ಅವರ ಮಾರ್ಗದರ್ಶನದಲ್ಲಿ ಶಿವಪ್ರಸಾದ ಆರ್.ನಾಯಕ ಮೊಗಟಾ ಅವರು ಎಂಜಿನಿಯರಿ0ಗ್ ಮತ್ತು ಕಂಪ್ಯೂಟರ್ ಉಪವಿಷಯದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಹಾಗೂ ಎನ್.ವಿ.ಶ್ರೀನಾಗ ಹಿರೇಗುತ್ತಿ ಮತ್ತು ರಜತ ಎನ್.ನಾಯಕ ಮೊಗಟಾ ಇವರು ರಸಾಯನಶಾಸ್ತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಮಹಾತ್ಮ ಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊನ್ನಪ್ಪ ನಾಯಕ, ಉಪಾಧ್ಯಕ್ಷ ಶ್ರೀಕಾಂತ ನಾಯಕ, ಕಾರ್ಯದರ್ಶಿ ಮೋಹನ ಕೆರೆಮನೆ, ಸದಸ್ಯರು, ಮುಖ್ಯೋಪಾಧ್ಯಾಯ ರೋಹಿದಾಸ ಗಾಂವಕರ, ಶಿಕ್ಷಕ ವೃಂದದವರು, ಆಶ್ರಯ ಫೌಂಡೇಶನ್ ಅಧ್ಯಕ್ಷ ರಾಜೀವ ಗಾಂವಕರ, ಗ್ರಾಮ ಪಂಚಾಯತ ಅಧ್ಯಕ್ಷೆ ನಾಗರತ್ನ ಗಾಂವಕರ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶಾಂತಾ ಎನ್.ನಾಯಕ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನೀಲಕಂಠ ನಾಯಕ, ಬ್ರಹ್ಮಜಟಕ ಯುವಕ ಸಂಘದ ಅಧ್ಯಕ್ಷ ಜಗದೀಶ ನಾಯಕ, ಸ್ಪಂದನ ಫೌಂಡೇಶನ್‌ನ ಎನ್.ರಾಮು ಹಿರೇಗುತ್ತಿ, ಊರ ನಾಗರಿಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೇತ್ರ ಶಿಕ್ಷಣಾಧಿಕಾರಿಗಳು ಅಭಿನಂದನೆ ಸಲ್ಲಿಸಿ ಮುಂದಿನ ಹಂತಕ್ಕೆ ಶುಭಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top