ಕಾರವಾರ: ತೋಟಗಾರಿಕೆ ಇಲಾಖೆಯು ಎನ್‌ಬಿಎಚ್‌ಎಂ ನ್ಯಾಷನಲ್ ಬೀ ಕೀಪಿಂಗ್ ಆ್ಯಂಡ್ ಹನಿ ಮಿಷನ್ ಅಡಿ ಪ್ರಗತಿಪರ ಜೇನು ಕೃಷಿಕರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಯು ಜೇನು ಸಾಕಣೆ, ಜೇನು ಕೃಷಿಯಲ್ಲಿ ನೂತನ ಆವಿಷ್ಕಾರಗಳ ಅಳವಡಿಕೆ ಮತ್ತು ಜೇನು ಕೃಷಿಯಲ್ಲಿ ಮೌಲ್ಯವರ್ಧನೆ ಈ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಆಸಕ್ತರು ಅರ್ಜಿ ನಮೂನೆಗಳನ್ನು ತಾಲೂಕಿನ ತೋಟಗಾರಿಕಾ ಕಛೇರಿಯಿಂದ ಪಡೆದು ಭರ್ತಿ ಮಾಡಿ ಪೂರಕ ದಾಖಲಾತಿಗಳೊಂದಿಗೆ ನ.25ರೊಳಗೆ ಇದೇ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿಪರ ಜೇನು ಕೃಷಿಕರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
