Slide
Slide
Slide
previous arrow
next arrow

ಪ್ರಿ ಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

300x250 AD

ಕಾರವಾರ: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ತುಮಕೂರು ಇವರಿಂದ 1ರಿಂದ 10ನೇ ಪ್ರೀ-ಮೆಟ್ರಿಕ್ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯುಡಿಐಡಿ ಉಳ್ಳ ವಿಕಲಚೇತನ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟೆಲ್ https://ssp.karnataka.gov.in ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ ಸ್ವೀಕೃತಿಯೊಂದಿಗೆ ಹಾರ್ಡ್ ಕಾಪಿಯನ್ನು ಡಿ.15ರೊಳಗಾಗಿ ಜಿಲ್ಲಾ ವಿಕಲಚೇತನರ ಕಛೇರಿ, ಜಿಲ್ಲಾ ಬಾಲಭವನ ಬಿಲ್ಡಿಂಗ್, ಎಂ.ಜಿ.ರಸ್ತೆ, ಕಾರವಾರ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382200758 ಗೆ ಸಂಪರ್ಕಿಸಬಹುದು ಎಂದು ವಿಕಲಚೇತನರ ಹಾಗೂ ಹಿರಿಯನಾಗರಿಕ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top