ಕಾರವಾರ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ ಜಾತಿ, ಪ. ವರ್ಗ ಮತ್ತು ಇತರೆ ಜನಾಂಗದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ವೆಬ್‌ಸೈಟ್ http://www.bcwd.karnataka.gov.in ಮೂಲಕ ನ.10ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಈಗ ಆ ಅವಧಿಯನ್ನು ನ.22ರವರೆಗೆ ವಿಸ್ತರಿಸಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 08382226588, 226589 ಗೆ ಸಂಪರ್ಕಿಸಿ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.