• Slide
    Slide
    Slide
    previous arrow
    next arrow
  • ಗ್ರಂಥಾಲಯಕ್ಕೆ ಪುಸ್ತಕ: ಆಕ್ಷೇಪಣೆ ಸಲ್ಲಿಸಲು ಅವಕಾಶ

    300x250 AD

    ಕಾರವಾರ: ಜಿಲ್ಲಾ ಕೇಂದ್ರ ಗ್ರಂಥಾಲಯವು 2020ನೇ ಸಾಲಿನ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಮತ್ತು 2022ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಏಕಗವಾಕ್ಷಿ ಮತ್ತು ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿಯಲ್ಲಿ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿ ಮುಂದೆ ಆಯ್ಕೆಗಾಗಿ ಮಂಡಿಸಲಾಗಿತ್ತು. ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಸಿ, ಆಯ್ಕೆಯಾದ ಹಾಗೂ ಆಯ್ಕೆಯಾಗದ ಕನ್ನಡ ಪುಸ್ತಕ ಪ್ರದರ್ಶನವನ್ನು ನ.22ರಿಂದ 24ರವರೆಗೆ ಗ್ರಂಥಾ0ಗಣ, ನಗರ ಕೇಂದ್ರ ಗ್ರಂಥಾಲಯ, ಪಶ್ಚಿಮ ವಲಯ ಹಂಪಿನಗರ, ಬೆಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.
    ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ- ಪ್ರಕಾಶಕರು, ವಿತರಕರು ಮತ್ತು ಪುಸ್ತಕ ಮಾರಾಟಗಾರರು ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ನ.30ರೊಳಗೆ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು- 560001 ಇಲ್ಲಿಗೆ ಸಲ್ಲಿಸಬೇಕು. ನಂತರದಲ್ಲಿ ಸಲ್ಲಿಕೆಯಾಗುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top