• Slide
    Slide
    Slide
    previous arrow
    next arrow
  • ದೇಶದಲ್ಲಿ ಈವರೆಗೆ 50 ಕೋಟಿ ಡೋಸ್ ಲಸಿಕೆ ವಿತರಣೆ

    300x250 AD

    ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ವಿತರಣೆಯಲ್ಲಿ ಅಭೂತ ಪೂರ್ವ ಯಶಸ್ಸು ಸಾಧಿಸಲಾಗಿದ್ದು, ಈಗಾಗಲೇ 50 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ. ಈ ಸಂಬಂಧ ಪ್ರಧಾನಿ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೇಶದಲ್ಲಿ ಕೊರೋನಾ ಲಸಿಕೆ ವಿತರಣೆಯ ಸಂಖ್ಯೆ 50 ಕೋಟಿ ಡೋಸ್ ದಾಟಿದ್ದು, ಕೊರೋನಾ ಹೋರಾಟದಲ್ಲಿ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಉತ್ತೇಜನ ದೊರೆತಂತಾಗಿದೆ. ಎಲ್ಲರಿಗೂ ಉಚಿತ ಲಸಿಕೆ ಧ್ಯೇಯದಡಿ ನಮ್ಮ ದೇಶದ ನಾಗರಿಕರಿಗೆ ಲಸಿಕೆ ನೀಡಲಾಗಿರುವುದಾಗಿ ಭಾವಿಸುತ್ತೇನೆ ಎಂದು ಹೇಳಿದ್ದಾರೆ.
    ಶುಕ್ರವಾರ ದೇಶದಲ್ಲಿ ಸುಮಾರು 43.29 ಲಕ್ಷ ಡೋಸ್ ಲಸಿಕೆಗಳನ್ನು ನೀಡಲಾಗಿದ್ದು, ಬೃಹತ್ ಕೊರೋನಾ ಲಸಿಕೆ ಅಭಿಯಾನದಲ್ಲಿ ಈವರೆಗೆ ದೇಶದಲ್ಲಿ 50 ಕೋಟಿ ಡೋಸ್ ಲಸಿಕೆಗಳ ವಿತಯಣೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸರ್ವರಿಗೂ ಉಚಿತ ಲಸಿಕೆ ಧ್ಯೇಯದಡಿ ಭಾರತ ಈ ಐತಿಹಾಸಿಕ ಸಾಧನೆ ಮೆರೆದಿದೆ ಎಂದು ಸಚಿವಾಲಯ ತಿಳಿಸಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top