ಹಳಿಯಾಳ: ಪಟ್ಟಣದ ಶ್ರೀ ಶಿವಾಜಿ ಪ್ರೌಢಶಾಲೆಯ ವಿದ್ಯಾರ್ಥಿನಿ, ಕುಸ್ತಿಪಟು ಶ್ವೇತಾ ಅಣ್ಣಿಗೇರಿ 17 ವರ್ಷದೊಳಗಿನ 49 ಕೆಜಿ ತೂಕದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕ ಪಡೆದಿದ್ದಾಳೆ.
ಉತ್ತರಾಖಂಡ ರಾಜ್ಯದ ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾಳೆ. ಈಕೆಯ ತಂದೆ ಸಂಜಯ ಅಣ್ಣಿಗೇರಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.