Slide
Slide
Slide
previous arrow
next arrow

ಶಿಕ್ಷಣ ಪದ್ಧತಿಯಲ್ಲಿ ಸರ್ಕಾರದಿಂದಲೇ ಗೊಂದಲ ಸೃಷ್ಟಿ: ಡಾ.ನಿರಂಜನಾರಾಧ್ಯ

300x250 AD

ಕಾರವಾರ: ಸರಕಾರ ಜನರ ನ್ಯಾಯಯುತ ಬೇಡಿಕೆಗೆ ಸ್ಪಂದಿಸುವ ಬದಲು ಶಿಕ್ಷಣ ಪದ್ಧತಿಯಲ್ಲಿ ಗೊಂದಲಗಳನ್ನು ಸೃಷ್ಟಿಸಿದೆ. ಈ ಮೂಲಕ ಕಲಿಕೆಯಲ್ಲಿ ಉಂಟಾಗಿದ್ದ ಬಿಕ್ಕಟ್ಟನ್ನು ಸುಧಾರಿಸಲು ಪೂರ್ಣವಾಗಿ ವಿಫಲವಾಗಿದೆ ಎಂದು ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಸಂಸ್ಥಾಪಕ ಮಹಾಪೋಷಕ ಡಾ.ನಿರಂಜನಾರಾಧ್ಯ ವಿ.ಪಿ. ಅಸಮಾಧಾನ ಹೊರಹಾಕಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತುರವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ತರಾತುರಿ ನಿರ್ಧಾರ, ಪಠ್ಯಕ್ರಮ ಚೌಕಟ್ಟಿಲ್ಲದೆ ಪಠ್ಯ ಪರಿಷ್ಕರಣೆ, ಅಲ್ಪಸಂಖ್ಯಾತರ ಹೆಣ್ಣು ಮಕ್ಕಳ ಶಿಕ್ಷಣವನ್ನು ಕಸಿಯುವ ಹಿಜಾಬ್ ನಿಷೇಧ, ವೈಜ್ಞಾನಿಕ ಶಿಕ್ಷಣವನ್ನು ಅಣಿಕಿಸುವ ರೀತಿಯಲ್ಲಿ ಧ್ಯಾನ, ವೇದಗಣಿತ, ಸನಾತನ ಶಿಕ್ಷಣ ಪದ್ಧತಿ, ಶಾಲಾ ಗೋಡೆಗಳಿಗೆ ಕೇಸರಿ ಬಣ್ಣ ಇತ್ಯಾದಿ ಗೊಂದಲಗಳನ್ನು ಸರ್ಕಾರವೇ ಸೃಷ್ಟಿಸಿದೆ. ಕೋವಿಡ್ ಸೋಂಕಿನ ನಂತರ ಶಾಲೆಗಳು ಪ್ರಾರಂಭವಾದಾಗ ಮಕ್ಕಳ ಕಲಿಕೆಗೆ ತೀವ್ರ ಹಿನ್ನಡೆಯುಂಟಾಗಿದೆ. ಅದನ್ನು ತುಂಬಿಕೊಡುವ ಮೂಲಕ ಮಕ್ಕಳ ಕಲಿಕೆಯನ್ನು ಮುಖ್ಯ ವಾಹಿನಿಗೆ ತರಬೇಕೆಂದು ಸಮನ್ವಯ ವೇದಿಕೆ ಹಾಗೂ ಹಲವು ಸಾಮಾಜಿಕ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸರಕಾರ ನಿರ್ಲಕ್ಷ್ಯ ಮಾಡಿದೆ ಎಂದು ದೂರಿದರು.
ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಸಿಗಬೇಕಾದ ಸಮವಸ್ತ್ರ, ಶೂ ಮತ್ತು ಸಾಕ್ಸ್ ವಿಚಾರದಲ್ಲಿ ಗೊಂದಲಗಳನ್ನು ಸೃಷ್ಟಿಸಿ, ವೇದಿಕೆಯು ಒತ್ತಾಯಿಸಿದ ಮೇಲೆ ಅವುಗಳನ್ನು ಒದಗಿಸುವ ಬಗ್ಗೆ ಮುಖ್ಯಮಂತ್ರಿ ತೀರ್ಮಾನಿಸಿದರು. 8ನೇ ತರಗತಿಯಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಈ ವರ್ಷ ಸೈಕಲ್ ವಿತರಣೆ ಮಾಡಿಯೇ ಇಲ್ಲ. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಮೊಟ್ಟೆ ವಿಚಾರದಲ್ಲೂ ಗೊಂದಲ ಸೃಷ್ಠಿ ಮಾಡಲಾಗಿದೆ. ಕಳೆದ ಒಂದೂವರೆ ವರ್ಷದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಸರಕಾರ ಪೂರ್ಣವಾಗಿ ಸೋತಿರುವುದು ಎದ್ದು ಕಾಣುತ್ತಿದೆ ಎಂದು ಅಭಿಪ್ರಾಯಿಸಿದರು.
ವೇದಿಕೆಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷೆ ಶಾಂತಿ ಮುಂಡರಗಿ, ಬೆಳಗಾವಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಉಮೇಶ ದೊಡ್ಡಗಂಗನವಾಡಿ, ಗಿರಿಜ ಎಂ.ಪಿ. ಪತ್ರಿಕಾಗೋಷ್ಠಿಯಲ್ಲಿದ್ದರು.

300x250 AD
Share This
300x250 AD
300x250 AD
300x250 AD
Back to top