ದಾಂಡೇಲಿ: ಬಂಗೂರನಗರ ಪದವಿ ಮಹಾವಿದ್ಯಾಲಯದ ಬಿ.ಕಾಂ ಮೂರನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಕು.ಅಶ್ವಿನಿ ಆರ್. ಪವಾರ್ ಸತತ ಎರಡನೇ ಬಾರಿ ಕರ್ನಾಟಕ ವಿಶ್ವವಿದ್ಯಾಲಯದ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾಗಿ ಯೂನಿವರ್ಸಿಟಿ ಬ್ಲೂ ಕೀರ್ತಿಗೆ ಭಾಜನರಾಗಿದ್ದಾರೆ.
ಇವರು ಬೆಂಗಳೂರು ಜೈನ್ ವಿಶ್ವವಿದ್ಯಾಲಯದಲ್ಲಿ ನ.21ರಿಂದ 24ರವರೆಗೆ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕವಿವಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಸಾಧನೆಗಾಗಿ ದಾಂಡೇಲಿ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು, ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಆರ್.ಜಿ.ಹೆಗಡೆ, ದೈಹಿಕ ಶಿಕ್ಷಣ ನಿರ್ದೇಶಕ ವಿನಯ್ ಎಸ್. ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದೆೆ.
ಕವಿವಿ ಬ್ಯಾಡ್ಮಿಂಟನ್ ತಂಡಕ್ಕೆ ಅಶ್ವಿನಿ ಪವಾರ್ ಆಯ್ಕೆ
