Slide
Slide
Slide
previous arrow
next arrow

ಸಂಸ್ಕೃತೋತ್ಸವ ಸ್ಪರ್ಧೆ:ಶ್ರೀನಿಕೇತನ ವಿದ್ಯಾರ್ಥಿಗಳ ಸಾಧನೆ

300x250 AD

ಶಿರಸಿ: ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಗಳು ಸಂಸ್ಕೃತೋತ್ಸವ ಅಂಗವಾಗಿ ಸೋಂದಾದ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಾಧನೆ ಮೆರೆದಿದ್ದಾರೆ.
ಎಂಟನೆಯ ತರಗತಿಯ ವಿದ್ಯಾರ್ಥಿನಿ ಕುಮಾರಿ ಅಪೂರ್ವಾ ಭಟ್ ಭಗವದ್ಗೀತಾ ಕಂಠಪಾಠದಲ್ಲಿ ಪ್ರಥಮ ಹಾಗೂ ಹತ್ತನೆಯ ತರಗತಿಯ ವಿದ್ಯಾರ್ಥಿನಿ ಕುಮಾರಿ ಅನನ್ಯಾ ಭಟ್‌ ಕನ್ನಡ ಭಾಷಣದಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಚಾರ್ಯರು, ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top