ಕಾರವಾರ: ಕಳೆದು ಹೋದ ಬಾಲ್ಯ ಮತ್ತೆ ಸಿಗಲ್ಲ. ವಿದ್ಯಾರ್ಥಿಗಳನ್ನು ಅತಿ ಎತ್ತರಕ್ಕೆ ಕರೆದೊಯ್ಯಬಲ್ಲ ಶಕ್ತಿ ಶಿಕ್ಷಕರಿಗೆ ಮಾತ್ರ ಇದೆ. ಶಿಕ್ಷಕ ವೃತ್ತಿಯಲ್ಲಿ ಸಿಗುವ ಗೌರವ ಕೋಟಿ ರೂಪಾಯಿ ಕೊಟ್ಟರೂ ಸಿಗದು ಎಂದು ತರಿಕೇರೆಯ ಸರ್ಕಾರಿ ಬಾಲಕರ ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಪ್ರತಿಭಾ ನಾಯಕ ಹೇಳಿದರು.
ನಗರದ ಹಿಂದೂ ಪ್ರೌಢಶಾಲೆಯ 125ನೇ ವರ್ಷಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾದ ಕರಿರ‍್ಸ್ & ಯು ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ನಂತರ ಯಾವ ಶಿಕ್ಷಣ ಪಡೆದರೆ ಮುಂದೆ ಯಾವ ವೃತ್ತಿ ಪಡೆಯಬಹುದು ಎಂಬುವುದನ್ನು ತಮ್ಮ ಗೋಷ್ಠಿಯಲ್ಲಿ ವಿವರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಸ್ವಾಗತ ಕೋರಿದರು. ಹಿಂದೂ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಅರುಣ ರಾಣೆ ವಂದನಾರ್ಪಣೆ ಸಲ್ಲಿಸಿದರು. ಸುಮತಿ ದಾಮ್ಲೆ ಪ್ರೌಢಶಾಲೆಯ ಶಿಕ್ಷಕ ಸಂತೋಷ ಶೇಟ್ ಕಾರ್ಯಕ್ರಮ ನಿರ್ವಹಿಸಿದರು. ಮುಖ್ಯಾಧ್ಯಾಪಕಿ ಗಿರಿಜಾ ಬಂಟ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಮೂರೂ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದು ಕಾರ್ಯಕ್ರಮದ ಪ್ರಯೋಜನ ಪಡೆದರು.