ಹಳಿಯಾಳ: ಇಲ್ಲಿನ ಕೆಎಲ್ಎಸ್ ಪಿಯು ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ ಖೇಮು ಹುಂಬೆ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕಬಡ್ಡಿ ಕ್ರೀಡೆಗೆ ಆಯ್ಕೆಯಾಗಿದ್ದಾನೆ.
ಹೊನ್ನಾವರದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕೆ ಆಯ್ಕೆಯಾಗಿದ್ದು, ಆದಿಚುಂಚನಗಿರಿಯ ಶ್ರೀಗಂಗಾಧರೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಭಾಗವಹಿಸಲಿದ್ದಾನೆ.
ಖೇಮು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಇದಕ್ಕೆ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ವಿನಾಯಕ ಲೋಕುರ, ಪ್ರಾಚಾರ್ಯ ಡಾ.ಎಸ್.ಎಂ.ಗಲಗಲಿ, ಶೈಕ್ಷಣಿಕ ಸಯೋಜಕ ಶ್ರೀನಿವಾಸ ಪ್ರಭು, ಕ್ರೀಡಾ ಸಂಯೋಜಕ ಮಲ್ಲಿಕಾರ್ಜುನ ಕಾಜಗಾರ ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.
ಕೆಎಲ್ಎಸ್ನ ವಿದ್ಯಾರ್ಥಿ ಕಬಡ್ಡಿಯಲ್ಲಿ ರಾಜ್ಯ ಮಟ್ಟಕ್ಕೆ
