Slide
Slide
Slide
previous arrow
next arrow

ದಾಂಡೇಲಿಯಲ್ಲಿ ಪಶುವೈದ್ಯ ಆಸ್ಪತ್ರೆಯ ಹೆಚ್ಚುವರಿ ಕಟ್ಟಡದ ಉದ್ಘಾಟನೆ

300x250 AD

ದಾಂಡೇಲಿ: ನಗರದ ರೋಟರಿ ಶಾಲೆಯ ಹತ್ತಿರವಿರುವ ಪಶುವೈದ್ಯ ಆಸ್ಪತ್ರೆಯ ಆವರಣದಲ್ಲಿ ಹಾಲಿ ಪಶುವೈದ್ಯ ಆಸ್ಪತ್ರೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನಿರ್ಮಿಸಲಾದ ಪಶುವೈದ್ಯ ಆಸ್ಪತ್ರೆಯ ಹೆಚ್ಚುವರಿ ಕಟ್ಟಡವನ್ನು ಶಾಸಕರಾದ ಆರ್.ವಿ.ದೇಶಪಾಂಡೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಾಂಡೇಲಿ ತಾಲೂಕಾಗಿರುವ ಹಿನ್ನಲೆಯಲ್ಲಿ ರೈತರಿಗೆ ತರಬೇತಿಗಳನ್ನು ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ರತ್ಯೇಕ ಕಟ್ಟಡವನ್ನು ನಿರ್ಮಿಸಲಾಗಿದೆ. ಈ ನೂತನ ಕಟ್ಟಡವು ರೈತರಿಗೆ ವಿವಿಧ ಸೌಲಭ್ಯಗಳನ್ನು ಕೊಡುವ ರೈತಮಿತ್ರ ಕಚೇರಿಯಾಗಲೆಂದು ಶುಭ ಹಾರೈಸಿದರು.
ಪಶುಪಾಲನೆ ಮತ್ತು ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಕೆ.ಎಂ.ನದಾಫ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ನೂತನ ಕಟ್ಟಡದಲ್ಲಿ ಇಲಾಖೆಯಡಿ ರೈತರಿಗೆ ತರಬೇತಿ, ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್, ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ್, ಸದಸ್ಯರುಗಳಾದ ಯಾಸ್ಮಿನ್ ಕಿತ್ತೂರು, ಮೋಹನ ಹಲವಾಯಿ, ಮಹಾದೇವ ಜಮಾದಾರ ಹಾಗೂ ತಹಶೀಲ್ದಾರ್ ಶೈಲೇಶ ಪರಮಾನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ ಹಾಲಮನ್ನವರ, ಬ್ಲಾಕ್ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ವಿ.ಆರ್.ಹೆಗಡೆ, ಪಶುವೈದ್ಯೆ ಡಾ.ಅರ್ಚನಾ ಸಿನ್ಹಾ ಮತ್ತು ಪಶುವೈದ್ಯ ಆಸ್ಪತ್ರೆಯ ಸಿಬ್ಬಂದಿಗಳು, ಮುಖಂಡರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top