• Slide
    Slide
    Slide
    previous arrow
    next arrow
  • ಓಲಂಪಿಕ್; ‘ಜವಲಿನ್ ಥ್ರೋ’ದಲ್ಲಿ ಬಂಗಾರಕ್ಕೆ ‘ಮುತ್ತಿಕ್ಕಿದ ನೀರಜ್ ಚೋಪ್ರಾ’

    300x250 AD

    ಟೋಕಿಯೋ: ಟೋಕಿಯೊ ಓಲಿಂಪಿಕ್ಸ್‍ನಲ್ಲಿ ಪದಕ ತರುವ ದೊಡ್ಡ ಭರವಸೆ ಮೂಡಿಸಿದ್ದ ಭಾರತದ ಆಟಗಾರರಲ್ಲಿ ಯುವ ಕ್ರೀಡಾಪಟು ನೀರಜ್ ಚೋಪ್ರಾ ಫೈನಲ್‍ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.


    ಇಂದು ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದರು. ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದ ನೀರಜ್, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದರು. ಆದರೆ ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು.


    ನಾಲ್ಕನೇ ಸುತ್ತಿನಲ್ಲಿ ಫೌಲ್ ಆಯಿತು. ಐದನೇ ಸುತ್ತು ಕೂಡಾ ಫೌಲ್ ಆಯಿತು. ಅಂತಿಮ ಸುತ್ತಿನವರೆಗೂ ಗರಿಷ್ಠ ದೂರ ಕಾಪಾಡಿದ ನೀರಜ್ ಚೋಪ್ರಾ ಜಯಶಾಲಿಯಾದರು. ಈಗ ಅಥ್ಲೆಟಿಕ್ಸ್‍ನಲ್ಲಿ ಚೊಚ್ಚಲ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.

    300x250 AD

    13 ವರ್ಷದ ಬಳಿಕ ಚಿನ್ನ: ಭಾರತದ ಒಲಿಂಪಿಕ್ಸ್ ನಲ್ಲಿ 13 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದಿತು. 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ 100 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಅಭಿನವ್ ಬಿಂದ್ರಾ ಬಂಗಾರದ ಪದಕ ಗೆದ್ದುಕೊಂಡಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top