• Slide
    Slide
    Slide
    previous arrow
    next arrow
  • ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೂ ಮುನ್ನ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ರಿಂಗಣ

    300x250 AD

    ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟಕ್ಕೂ ಮುನ್ನ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ರಿಂಗಣಿಸಿದ ವಿಚಾರ ಈಗ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
    ನವೆ0ಬರ್ 19ರ ಶನಿವಾರ ಸಂಜೆ ಸ್ಫೋಟ ನಡೆದಿದ್ದರೆ, ನ.18ರಂದು ದಕ್ಷಿಣ ಕನ್ನಡದ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ಸ್ಯಾಟಲೈಟ್ ಫೋನ್ ಮೂಲಕ ಕರೆ ಹೋಗಿದೆ. ಅರಣ್ಯ ಪ್ರದೇಶದಲ್ಲಿ ನಿಷೇಧಿತ ತುರಾಯ ಕಂಪನಿಯ ಸ್ಯಾಟಲೈಟ್ ಫೋನ್ ಬಳಸಲಾಗಿರುವ ಮಾಹಿತಿ ಈಗ ಸಿಕ್ಕಿದೆ. ಸ್ಯಾಟಲೈಟ್ ಫೋನ್ ಜಾಗವನ್ನು ಬೇಹುಗಾರಿಕಾ ಏಜೆನ್ಸಿಗಳು ಪತ್ತೆ ಮಾಡಿದ್ದು, ಪೊಲೀಸರು ಈಗ ಈ ಕೋನದಲ್ಲೂ ತನಿಖೆ ಆರಂಭಿಸಿದ್ದಾರೆ.
    ದಕ್ಷಿಣ ಕನ್ನಡ ಜಿಲ್ಲೆಯ ಎರಡು, ಉಡುಪಿ ಒಂದು ಕಡೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಿಂದ ಸ್ಯಾಟಲೈಟ್ ಫೋನ್ ಮೂಲಕ ಕರೆ ಹೋಗಿದೆ. ಸುಮಾರು 5 ವರ್ಷಗಳಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಸ್ಯಾಟಲೈಟ್ ಫೋನ್ ಸದ್ದು ಮಾಡುತ್ತಿವೆ. ಯುನೈಟೆಡ್ ಅರಬ್ ಎಮಿರೇಟ್ಸ್ ಮೂಲದ ತುರಾಯ ಕಂಪನಿ ಯುರೋಪ್, ಮಧ್ಯಪ್ರಾಚ್ಯ, ಉತ್ತರ, ಮಧ್ಯ ಮತ್ತು ಪೂರ್ವ ಆಫ್ರಿಕಾ, ಏಷ್ಯಾ ಮತ್ತು ಆಸ್ಟ್ರೇಲಿಯಾ ಸೇರಿದಂತೆ ಒಟ್ಟು 161 ದೇಶಗಳಿಗೆ ಧ್ವನಿ ಸೇವೆಗಳನ್ನು ನೀಡುತ್ತಿದೆ. ಆದರೆ ಭಾರತದಲ್ಲಿ ಈ ಫೋನ್ ಅನ್ನು ನಿಷೇಧಿಸಲಾಗಿದೆ.


    ಎನ್‌ಐಗೆ ಪ್ರಕರಣ ವರ್ಗ
    ದಕ್ಷಿಣ ಕನ್ನಡ ಜಿಲ್ಲೆ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವರ್ಗಾಯಿಸಲಾಗಿದೆ.
    ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ತನಿಖೆ ನಡೆಸಲು, ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಯುಎಪಿಎ ಕಾಯ್ದೆ ಅನ್ವಯ ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ. ಕಂಕನಾಡಿ ನಾಗುರಿ ಬಳಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್ ನನ್ನು ಬಂಧಿಸಲಾಗಿದೆ. ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿರುವ ಶಾರಿಕ್ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
    ಪ್ರಕರಣದ ತನಿಖೆಯನ್ನು ಎನ್‌ಐಎಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯುಎಪಿಎ ಕಾಯ್ದೆ ಅನ್ವಯ ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ. ಪ್ರಕರಣದ ಸಂಬ0ಧ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯ, ಮಾಹಿತಿಗಳ ಆಧಾರದ ಮೇಲೆ ತನಿಖೆಯನ್ನು ಎನ್‌ಐಎಗೆ ವರ್ಗಾವಣೆ ಮಾಡಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top