ಶಿರಸಿ: ನಗರದ ಎಂ.ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ವಿಭಾಗದಿಂದ ಪಾರಂಪರಿಕ ತಾಣವನ್ನು ಉಳಿಸಿ ವಿಷಯದ ಮೇಲೆ ವಿವಿಧ ಕಾರ್ಯಕ್ರಮಗಳು ನಡೆದವು.
ತಾಲೂಕಿನ ಗುಡ್ನಾಪುರಕ್ಕೆ ತೆರಳಿದ ಕಾಲೇಜಿನ ವಿದ್ಯಾರ್ಥಿಗಳು, ಅಲ್ಲಿನ ತಾಣವನ್ನು ವೀಕ್ಷಿಸಿ ರಾಣಿವಿಲಾಸವನ್ನು ಸ್ವಚ್ಛಗೊಳಿಸಿದರು. ಅಲ್ಲಿನ ಪಾರಂಪರಿಕತೆಯ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸಲು ಜಾಥಾ ನಡೆಸಿದರು. ಗುಡ್ನಾಪುರ ಶಾಲೆಯಲ್ಲಿ ಸಭಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಶಾಲಾ ಮುಖ್ಯಶಿಕ್ಷಕಿ ವಿಜಯಾ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಗೀತಾ ನಾಯ್ಕ, ತಿರಸ್ವಾಮಿ ಮಡಿವಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಊರ ನಾಗರಿಕರು ಹಾಗೂ ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು. ಸ್ವಚ್ಚತಾ ಕಾರ್ಯಕ್ರ‍್ರಮ ನಡೆಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕಿ ಪ್ರೀತಿ ಭಂಡಾರಿ, ಚಿನ್ಮಯಿ ಹೆಗಡೆ ಹಾಗೂ ಉಪನ್ಯಾಸಕರು ಪಾಲ್ಗೊಂಡಿದ್ದರು.