• Slide
    Slide
    Slide
    previous arrow
    next arrow
  • ಖಾಸಗಿ ಶಾಲಾ ಶಿಕ್ಷಕರಿಗೆ ‘ಕಿಟ್’ ವಿತರಿಸಿದ ಸುಷ್ಮಾ ರಾಜಗೋಪಾಲ ರೆಡ್ಡಿ

    300x250 AD

    ಶಿರಸಿ: ಶಿರಸಿ ಶೈಕ್ಷಣಿಕ ಜಿಲ್ಲೆ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ತಾಲೂಕಿನ 110 ಶಿಕ್ಷಕರಿಗೆ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.


    ಸುಷ್ಮಾ ರಾಜಗೋಪಾಲ ರೆಡ್ಡಿ ಈ ಸಂದರ್ಭದಲ್ಲಿ ಮಾತನಾಡುತ್ತಾ ಸಮಾಜವು ಶಿಕ್ಷಕರ ಋಣವನ್ನು ತೀರಿಸಲು ಸಾಧ್ಯವಿಲ್ಲ. ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಅತ್ಯಂತ ಗೌರವಯುತವಾಗಿ ಬಳಸಿಕೊಳ್ಳಬೇಕಾಗಿದೆ. ಈ ಸಮುದಾಯ ಕೋವಿಡ್‍ನಿಂದ ತೀರಾ ಸಂಕಷ್ಟಕ್ಕೆ ಗುರಿಯಾಗಿದೆ. ಸಮಾಜದ ಪ್ರತಿಯೊಬ್ಬರು ಇವರ ನೆರವಿಗೆ ನಿಲ್ಲುವ ಅನಿವಾರ್ಯತೆ ಇದೆ ಎಂದು ಹೇಳಿದರು.

    300x250 AD


    ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್‍ನ ಜಿಲ್ಲಾ ಕಾರ್ಯದರ್ಶಿ ಸತೀಶ ನಾಯ್ಕ ಕಾರ್ಯಕ್ರಮದ ಅರ್ಥಪೂರ್ಣತೆ ಕುರಿತು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರ್ಯಪ್ರಕಾಶ, ಮಾಜಿ ನಗರಸಭಾ ಪ್ರಾಧಿಕಾರದ ಸದಸ್ಯ ಶಂಕರ ಗುಡ್ಡದಮನೆ, ಮೀನುಗಾರರ ಸಂಘದ ಸದಸ್ಯ ರಾಜು ಉಗ್ರಾಣಕರ, ಸುಮಾ ಉಗ್ರಾಣಕರ, ಉತ್ತರ ಕನ್ನಡ ಜಿಲ್ಲಾ ಸಹಾಯವಾಣಿ ಅಧ್ಯಕ್ಷ ವಿಶ್ವನಾಥ ಗೌಡ, ಕಿಸಾನ್ ಸಮಿತಿಯ ಕಾರ್ಯದರ್ಶಿ ಮಾಲತಿ ಮರಾಠೆ, ಯುವ ಕಾಂಗ್ರೆಸ್ ಅಧ್ಯಕ್ಷ ಅಜರ್, ಕಾಂಟ್ರಾಕ್ಟರ್ ಮಹೇಶ ಶೆಟ್ಟಿ ಉಪಸ್ಥಿತರಿದ್ದರು.


    ಶಿರಸಿ ಶೈಕ್ಷಣಿಕ ಜಿಲ್ಲೆಯ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಶಾಂಕ ಹೆಗಡೆ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಕಿರಣ ಭಟ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂತೋಷ ಉಪಸ್ಥಿತರಿದ್ದರು. ಶಿರಸಿ ತಾಲೂಕಾ ಶಿಕ್ಷಕರ ಸಂಘದ ಅಧ್ಯಕ್ಷವಿನೋದ ಡಯಾಸ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲಾ ಸಮಿತಿ ಸದಸ್ಯರು, ಶಿರಸಿ ತಾಲೂಕಾ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಶಿರಸಿಯ ವಿವಿಧ ಖಾಸಗಿ ಶಾಲೆಗಳ ಶಿಕ್ಷಕರು ಪಾಲ್ಗೊಂಡಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top