• Slide
  Slide
  Slide
  previous arrow
  next arrow
 • ವಿಶ್ವದಲ್ಲೇ ಅತಿದೊಡ್ಡ ಮೂತ್ರಕೋಶದ ಕಲ್ಲು; ಮಣಿಪಾಲ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ

  300x250 AD

  ಹೊನ್ನಾವರ: ಮಣಿಪಾಲದ ಕಸ್ತೂರ ಬಾ ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರಜ್ಞರ ತಂಡದಿಂದ ಅತಿದೊಡ್ಡ ಮೂತ್ರಕೋಶದ ಕಲ್ಲನ್ನು ಹೊರ ತೆಗೆಯಲಾಗಿದೆ. ಇದು ವಿಶ್ವದಲ್ಲಿ ಇಲ್ಲಿಯವರೆಗೆ ವರದಿಯಾಗಿರುವ ಮಹಿಳಾ ರೋಗಿಗಳ ಪೈಕಿ ಅತಿ ದೊಡ್ಡ ಮೂತ್ರಕೋಶದ ಕಲ್ಲು ಆಗಿದೆ.
  60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರದ ದೂರುಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಇತ್ತೀಚೆಗೆ ಕಸ್ತೂರ ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು. ರೋಗಿಗೆ ಸರಳ ಸಿಟಿ ಸ್ಕ್ಯಾನ್ ಮಾಡಲಾಯಿತು.
  ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಉಪ ವೈದ್ಯಕೀಯ ಅಧೀಕ್ಷಕರಾದ ಡಾ.ಪದ್ಮರಾಜ್ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ 11.5*7.5 ಸೆಂ.ಮೀ. ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಡಾ.ಅಂಶುಮನ್, ಡಾ|| ಕಾಶಿ ವಿಶ್ವನಾಥ್, ಡಾ|| ನಿಶಾ, ಡಾ|| ವಿವೇಕ್ ಪೈ ಮತ್ತು ಡಾ|| ಕೃಷ್ಣ ಅವರ ತಂಡವು ತೆರೆದ ಸಿಸ್ಟೊಲಿಥೊಟಮಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದರು. ಎರಡನೇ ದಿನ ರೋಗಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆರೋಗ್ಯವಂತ ವಯಸ್ಕ ಮಹಿಳೆಯಲ್ಲಿ 672 ಗ್ರಾಂ ತೂಕದ ದೈತ್ಯ ಮೂತ್ರಕೋಶದ ಕಲ್ಲು ಪ್ರಕರಣವು, ನಮ್ಮ ಜ್ಞಾನದ ಪ್ರಕಾರ ಇದು ವಿಶ್ವದಲ್ಲಿ ವರದಿಯಾಗಿರುವ ಮಹಿಳಾ ರೋಗಿಯಲ್ಲಿನ ಅತಿ ದೊಡ್ಡ ಮೂತ್ರಕೋಶದ ಕಲ್ಲು. ಇಲ್ಲಿಯವರೆಗೆ ವರದಿಯಾದ ಅತಿದೊಡ್ಡ ಮೂತ್ರಕೋಶದ ಕಲ್ಲು ಮುಂಬೈನ ಕೆ.ಇ.ಎಂ ಆಸ್ಪತ್ರೆಯಲ್ಲಿ, ಅದು 528 ಗ್ರಾಂ ತೂಕವಿತ್ತು.
  ಅಪರೂಪದ ಕ್ಲಿಷ್ಟಕರ ಶಸ್ತ್ರಚಿಕಿತ್ಸಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದ ತಂಡವನ್ನು ಮಾಹೆ ಮಣಿಪಾಲದ ಭೋದನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅಭಿನಂದಿಸಿದ್ದಾರೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top