• Slide
  Slide
  Slide
  previous arrow
  next arrow
 • ಅಕ್ರಮವಾಗಿ ಮರಳುಗಾರಿಕೆ ತಡೆಯಿರಿ: ಡಿಸಿ ಸೂಚನೆ

  300x250 AD

  ಕಾರವಾರ: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದರೆ ಅದನ್ನು ಕಟ್ಟುನಿಟ್ಟಾಗಿ ತಡೆಯಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.
  ಮರಳುಗಾರಿಕೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಅವರು, ಕಾನೂನು ಬಾಹಿರವಾಗಿ ಮರಳುಗಾರಿಕೆ ನಡೆಯುತ್ತಿದ್ದು, ಅದನ್ನು ತಡೆಗಟ್ಟಲು ಯಾವೆಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದೀರಿ? ಅಕ್ರಮ ಮರಳುಗಾರಿಕೆ ತಡೆಗಟ್ಟಲು ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
  ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಪ್ರಿಯಾಂಗಾ ಎಂ., ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್, ಹಿರಿಯ ಭೂವಿಜ್ಞಾನಿ ಆಶಾ ಎಂ.ಎಸ್., ಪ್ರಭಾರ ಎಎಸ್‌ಪಿ ಅರವಿಂದ ಕಲಗುಜ್ಜಿ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top