ಕುಮಟಾ: ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಕುಮಟಾದ ಮಣಕಿ ಮೈದಾನದಲ್ಲಿ ಜನಜಾಗೃತಿ ಸಮಾವೇಶವು ಅತ್ಯಂತ ಅಚ್ಚುಕಟ್ಟಾಗಿ ನಡೆಯಲು ಕಾರಣೀಕರ್ತರಾದ ಕುಮಟಾ- ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಶ್ರಮವನ್ನು ಸಮಾವೇಶದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಕ್ತ ಕಂಠದಿಂದ ಶ್ಲಾಘಿಸಿದರು. ಅಲ್ಲಿಯೇ ಉಪಸ್ಥಿತರಿದ್ದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್.ತೆಂಗೇರಿ ಮತ್ತು ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಲ್.ನಾಯ್ಕ ಅವರ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಮೂಲಕ ಅವರನ್ನು ಅಭಿನಂದಿಸಿದರು.
ಜನಜಾಗೃತಿ ಸಮಾವೇಶ ತಯಾರಿಯಲ್ಲಿ ಶ್ರಮಿಸಿದವರಿಗೆ ಡಿ.ಕೆ.ಶಿ. ಶ್ಲಾಘನೆ
