ಅಂಕೋಲಾ: ಈಡಿಗ ನಿಗಮ ಮಂಡಳಿ ರಚಿಸಲು ಹಾಗೂ ಈಡಿಗರು ಹೆಚ್ಚಿರುವ ಕ್ಷೇತ್ರಗಳಲ್ಲಿ ಈಡಿಗರಿಗೂ ರಾಷ್ಟ್ರೀಯ ಪಕ್ಷಗಳು ಚುನಾವಣೆಯಲ್ಲಿ ಟಿಕೇಟ್ ನೀಡಬೇಕು ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ.6ರಿಂದ ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿರುವ ಕಲಬುರಗಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಡಾ.ಪ್ರಣವಾನಂದ ಸ್ವಾಮೀಜಿಯವರು ನ.28ರಂದು ಸಂಜೆ 4 ಗಂಟೆಗೆ ಪಟ್ಟಣದ ನಾಮಧಾರಿ ಸಭಾಭವನಕ್ಕೆ ಆಗಮಿಸಲಿದ್ದಾರೆ.
ಈಡಿಗ ಸಮಾಜದ ಸಂಘಟನೆಯ ಮತ್ತು ಇನ್ನಿತರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಸುದೀರ್ಘ 658 ಕಿ.ಮೀ. ಕ್ರಮಿಸಿ ಫೆ.16ರಂದು ಫ್ರೀಡಂ ಪಾರ್ಕ್ ನಲ್ಲಿಅಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಹೀಗಾಗಿ ಸಂಘಟಕರ ಆಹ್ವಾನದ ಮೇರೆಗೆ ಇಲ್ಲಿಗೆ ಬಂದು ಸಮಾಲೋಚನೆ ನಡೆಸಲಿದ್ದು, ಅಂದು ಹೆಚ್ಚಿನ ಸಂಖ್ಯೆಯಲ್ಲಿ ನಾಮಧಾರಿ ಸಮಾಜದವರು ಆಗಮಿಸುವಂತೆ ಸಂಘಟಕರು ಕೋರಿದ್ದಾರೆ.
ನ.28ಕ್ಕೆ ಅಂಕೋಲಾದಲ್ಲಿ ಡಾ.ಪ್ರಣವಾನಂದ ಸ್ವಾಮೀಜಿ
