ದಾಂಡೇಲಿ: ನಗರದ ಭಟ್ ಆಸ್ಪತ್ರೆಯಲ್ಲಿ ನ.27ರ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತವಾಗಿ ಸಕ್ಕರೆ ಕಾಯಿಲೆ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಹಿರಿಯ ವೈದ್ಯ ಡಾ.ಜಿ.ವಿ.ಭಟ್ ತಿಳಿಸಿದ್ದಾರೆ.
ಈ ಶಿಬಿರದಲ್ಲಿ 15 ವರ್ಷ ಲಂಡನ್‌ನಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿರುವ ಡಾ.ಚಂದನ ಕಾಮತ್ ಅವರು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದ್ದಾರೆ.
ನ.27ಕ್ಕೆ ಉಚಿತ ಸಕ್ಕರೆ ಕಾಯಿಲೆ ತಪಾಸಣಾ ಶಿಬಿರ
