ಮುಂಡಗೋಡ: ಸಚಿವ ಶಿವರಾಮ ಹೆಬ್ಬಾರ್ ಅವರು ಮುಂಡಗೋಡ ತಾಲೂಕಿನ ಸಾಲಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಗಿನಕೊಪ್ಪ- ಮೊರಾರ್ಜಿ ವಸತಿ ಶಾಲೆಗೆ ತೆರಳುವ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಲ್.ಟಿ.ಪಾಟೀಲ್, ಪ.ಪಂ ಅಧ್ಯಕ್ಷೆ ಜಯಸುಧಾ ಬೋವಿ, ಪ್ರಮುಖರಾದ ಗುಡ್ಡಪ್ಪ ಕಾತೂರ ಹಾಗೂ ಸಾಲಗಾಂವ್ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಕರಗಿನಕೊಪ್ಪ- ಮೊರಾರ್ಜಿ ವಸತಿ ಶಾಲೆಯ ರಸ್ತೆ ಕಾಮಗಾರಿಗೆ ಸಚಿವ ಹೆಬ್ಬಾರ್ ಚಾಲನೆ
