• first
    second
    third
    previous arrow
    next arrow
  • Trending Now

    ಆ.9 ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟ; ಸಚಿವ ಬಿ.ಸಿ.ನಾಗೇಶ್

    300x250 AD

    ಬೆಂಗಳೂರು: ಆಗಸ್ಟ್ 9 ರ ಸೋಮವಾರದಂದು ಮಧ್ಯಾಹ್ನ 3.30ಕ್ಕೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ (SSLC Results) ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ.


    ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಅವರು, ಜುಲೈ.19 ಮತ್ತು 22 ರಂದು ನಡೆದಿದ್ದಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶವನ್ನು ಆ.9 ಸೋಮವಾರ ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸುವುದಾಗಿ ತಿಳಿಸಿದರು.

    300x250 AD


    ಈ ಬಾರಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ. ಸೋಮವಾರ ಮಧ್ಯಾಹ್ನ 3.30 ಕ್ಕೆ ಎಸ್‍ಎಸ್‍ಎಲ್‍ಸಿ ಬೋರ್ಡ್ ನಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಲಿದೆ. ಈ ವರ್ಷ ಸುಮಾರು 8.72 ಲಕ್ಷ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top