• Slide
    Slide
    Slide
    previous arrow
    next arrow
  • ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಗೃಹ ಸಚಿವರ ಸೂಚನೆ

    300x250 AD

    ಕಾರವಾರ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್‌ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆ ಬೆನ್ನಲ್ಲೇ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
    ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಮಹಾರಾಷ್ಟ್ರದ ಮೀರಜ್‌ನಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, ಬೆಳಗಾವಿ ಪೊಲೀಸರು ಮುಂಜಾಗೃತಾ ಕ್ರಮವಾಗಿ ಮೀರಜ್ ಹಾಗೂ ಕಾಗವಾಡ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.
    ಶಾಂತಿ ಕಾಪಾಡಲು ಅಧಿಕಾರಿಗಳು ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಶೀಘ್ರವೇ ಎರಡೂ ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top