Slide
Slide
Slide
previous arrow
next arrow

ಡಿ.1ಕ್ಕೆ ಕುಮಟಾ ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆ

300x250 AD

ಕುಮಟಾ: ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನ ಡಿ.1, ಮುಂಜಾನೆ 10 ಗಂಟೆಗೆ ಕುಮಟಾದ ಮಹಾಸತಿ ಸಭಾಭವನದಲ್ಲಿ ಕರೆಯಲಾಗಿದೆ ಎಂದು ತಾಲೂಕಾ ಅಧ್ಯಕ್ಷ ಮಂಜುನಾಥ ಮರಾಠಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೋಢೀಕರಿಸಿ ಅರಣ್ಯವಾಸಿಗಳ ಹಿತ ಕಾಪಾಡುವ ಮತ್ತು ಭೂಮಿ ಹಕ್ಕಿಗೆ ಆಗ್ರಹಿಸಿ ಡಿ.10 ರಂದು ಶಿರಸಿಯಲ್ಲಿ ರಾಜ್ಯಮಟ್ಟದ ಅರಣ್ಯವಾಸಿಗಳ ರ‍್ಯಾಲಿ ಸಂಘಟಿಸಲಾಗಿರುವ ಹಿನ್ನೆಲೆಯಲ್ಲಿ, ಅಸಮರ್ಪಕ ಜಿಪಿಎಸ್ ಮೇಲ್ಮನವಿ ಅಭಿಯಾನ ಹಾಗೂ ಅರಣ್ಯ ಸಿಬ್ಬಂದಿಗಳಿಂದ ಉಂಟಾಗುತ್ತಿರುವ ದೌರ್ಜನ್ಯ, ಕಿರುಕುಳ ಕುರಿತು ಚರ್ಚಿಸಲಾಗುವುದು ಹಾಗೂ ಈ ಸಭೆಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಉಪಸ್ಥಿತರಿರುವರೆಂದು ಅವರು ಹೇಳಿದ್ದಾರೆ.

300x250 AD

 ಕಾರಣ, ಆಸಕ್ತ ಅರಣ್ಯ ಅತಿಕ್ರಮಣದಾರರು ಹೆಚ್ಚಿನ ಸಂಖ್ಯೆಯಲ್ಲಿ ಕುಮಟಾ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಗೆ ಹಾಜರಾಗಲು ಮಂಜುನಾಥ ಮರಾಠಿ ಕೋರಿದ್ದಾರೆ.

Share This
300x250 AD
300x250 AD
300x250 AD
Back to top