ಹಳಿಯಾಳ: ತಾಲೂಕಿನ ಜವಳಿಗಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ವಿದ್ಯಾರ್ಥಿನಿಯರಿಗೆ ಕೆಎಲ್‌ಎಸ್ ವಿಡಿಐಟಿ ವಿದ್ಯಾರ್ಥಿಗಳು ಕಂಪ್ಯೂಟರ್ ಬಳಕೆಯ ಮಾಹಿತಿ ನೀಡಿದರು.
ಕಂಪ್ಯೂಟರ್ ಸೈನ್ಸ್ ವಿಭಾಗದ ಐದನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್ ಪಾಯಿಂಟ್ ಕುರಿತಾಗಿ ಮಾಹಿತಿಯನ್ನು ನೀಡಿದರು. ಪ್ರೊ.ರವೀಂದ್ರ ಪಾಟೀಲ್, ಪ್ರೊ.ಕಾರ್ತಿಕ್ ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಒಂದು ತಿಂಗಳವರೆಗೆ ಕಂಪ್ಯೂಟರ್ ತರಬೇತಿ ನೀಡಲಿದ್ದಾರೆ ಎಂದು ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಪ್ರೊ.ಪೂರ್ಣಿಮಾ ರಾಯ್ಕರ್ ತಿಳಿಸಿದ್ದಾರೆ.
ಪ್ರೌಢಶಾಲಾ ಮುಖ್ಯಾಧ್ಯಾಪಕ ವಿನಾಯಕ ಶೇಟ್ ಅವರು ಈ ರೀತಿಯ ತರಬೇತಿ ಕಾರ್ಯಕ್ರಮಗಳು ನಮ್ಮ ವಿದ್ಯಾರ್ಥಿನಿಯರಿಗೆ ಕಂಪ್ಯೂಟರ್ ಶಿಕ್ಷಣ ಪಡೆಯಲು ತುಂಬಾ ಸಹಕರಿಯಾಗಿದೆ ಎಂದು ಹೇಳಿದರು. ನಮ್ಮ ವಿದ್ಯಾಲಯವು ವಿಡಿಐಟಿ ಮಹಾವಿದ್ಯಾಲಯಕ್ಕೆ ಆಭಾರಿಯಾಗಿದೆ ಎಂದು ಹೇಳಿದರು. ನಮಗೆ ಮೈಕ್ರೋಸಾಫ್ಟ್ ವರ್ಡ್, ಪವರ್ ಪಾಯಿಂಟ್ ಹಾಗೂ ಎಕ್ಸಲ್ ಕುರಿತು ಉತ್ತಮವಾಗಿ ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಹಾವಿದ್ಯಾಲಯದ ವಿದ್ಯಾರ್ಥಿಗಳೇ ಶಿಕ್ಷಕರಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ನೀಡುತ್ತಿರುವುದು ಸಂತಸ ತಂದಿದೆ ಎಂದು ಪ್ರಾಚಾರ್ಯ ಡಾ.ವಿ.ಎ. ಕುಲಕರ್ಣಿ ತಿಳಿಸಿದ್ದಾರೆ.
ಶಿಕ್ಷಕರಾಗಿ ಮಕ್ಕಳಿಗೆ ಕಂಪ್ಯೂಟರ್ ಕಲಿಸುತ್ತಿರುವ ವಿದ್ಯಾರ್ಥಿಗಳು!
