• Slide
  Slide
  Slide
  previous arrow
  next arrow
 • ಶಿಸ್ತುಬದ್ಧ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಿ: ಹೆಬ್ಬಾರ್

  300x250 AD

  ಮುಂಡಗೋಡ: ಶಿಸ್ತುಬದ್ಧ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಿ ಎಂದು ಶಿಕ್ಷಕರಿಗೆ ಸಚಿವ ಶಿವರಾಮ ಹೆಬ್ಬಾರ್ ಕರೆ ನೀಡಿದರು.
  ತಾಲೂಕಿನ ಮೈನಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿಗಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಶಿಸ್ತು ಮತ್ತು ವಿದ್ಯೆ ಎರಡೂ ಇರುವ ವಿದ್ಯಾರ್ಥಿಗಳಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.
  ಮುಂಡಗೋಡ- ಯಲ್ಲಾಪುರದಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯನ್ನು ಮುಂಡಗೋಡದಿಂದ ಶಿಡ್ಲಗುಂಡಿಯವರೆಗೆ 25 ಕೋಟಿ ವೆಚ್ಚದಲ್ಲಿ ಅಗಲೀಕರಣ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಶಿಡ್ಲಗುಂಡಿಯಿಂದ ಯಲ್ಲಾಪುರದವರೆಗೆ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ ಎಂದರು.
  ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೆಬ್ಬಾರ್ ಫೌಂಡೇಶನ್‌ನಿಂದ ಸರ್ಕಾರಿ ಪ್ರೌಢಶಾಲೆ, ಪಿಯು ಕಾಲೇಜು, ಪದವಿ ಕಾಲೇಜು, ಡಿಪ್ಲೋಮಾ ಕಾಲೇಜು ಹಾಗೂ ಐಟಿಐ ಕಾಲೇಜುಗಳಲ್ಲಿ ನೋಟ್‌ಬುಕ್ ವಿತರಣೆ ಮಾಡುತ್ತಿದ್ದೇವೆ ಎಂದರು.
  ಈ ಸಂದರ್ಭದಲ್ಲಿ ಕೆಡಿಸಿಸಿ ನಿರ್ದೇಶಕ ಎಲ್.ಟಿ.ಪಾಟೀಲ, ಜಿ.ಪಂ ಮಾಜಿ ಸದಸ್ಯ ರವೀಂದ್ರಗೌಡ ಪಾಟೀಲ, ಕೆಂಜೋಡಿ ಗಲಿಬಿ, ಪರಶುರಾಮ ತಹಶೀಲ್ದಾರ, ಪ್ರಭಾರ ಬಿಇಒ ವೈ.ಪಿ.ಭುಂಜಂಗಿ, ಪಿ.ಆರ್‌.ಇ.ಡಿ ಸಹಾಯಕ ಇಂಜನೀಯರ್ ಪ್ರದೀಪ ಭಟ್ಟ, ಎಸ್‌.ಡಿ.ಎಮ್‌.ಸಿ ಅಧ್ಯಕ್ಷ, ಮೈನಳ್ಳಿ ಗ್ರಾ.ಪಂ ಅಧ್ಯಕ್ಷೆ, ಸದಸ್ಯರು ಇದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top